ರಿಪ್ಪನ್ಪೇಟೆ: ಪಟ್ಟಣದ ಶಿವಮೊಗ್ಗ ರಸ್ತೆಯಲ್ಲಿರುವ ಮೊಟ್ಟೆ ಸಾಗಿಸುತ್ತಿದ್ದ ಕ್ಯಾಂಟರ್ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿಯಾಗಿ ಪಲ್ಟಿಯಾಗಿದೆ. ರಿಪ್ಪನ್ಪೇಟೆ ಗ್ರಾಮ ಪಂಚಾಯಿತಿ ಕಚೇರಿ ಮುಂಭಾಗದಲ್ಲಿ ತಡರಾತ್ರಿ ಘಟನೆ ಸಂಭವಿಸಿದೆ. ➤ ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.
ಪಲ್ಟಿಯಾದ ವಾಹನವು ಆನಂದಪುರ ನಿವಾಸಿ ಖಲೀಮುಲ್ಲಾ ಅವರಿಗೆ ಸೇರಿದೆ ಎಂದು ತಿಳಿದ ಬಂದಿದೆ. ಘಟನೆಯಲ್ಲಿ ಕ್ಯಾಂಟರ್ ವಾಹನದಲ್ಲಿದ್ದ ಅರ್ಧಕ್ಕೂ ಹೆಚ್ಚು ಮೊಟ್ಟೆಗಳು ಒಡೆದು ರಸ್ತೆಯುಲ್ಲಿ ಚೆಲ್ಲಾಪಿಲ್ಲಿಯಾಗಿವೆ. ಇದರಿಂದ ಸಾವಿರಾರು ರೂಪಾಯಿ ನಷ್ಟ ಉಂಟಾಗಿದೆ ಎಂದು ಅಂದಾಜಿಸಲಾಗಿದೆ.

ಕ್ರೇನ್ ಮೂಲಕ ವಾಹನವನ್ನು ತೆರವುಗೊಳಿಸಲಾಗಿದೆ. ರಸ್ತೆಯ ಮೇಲೆ ಹರಡಿದ್ದ ಒಡೆದ ಮೊಟ್ಟೆಗಳನ್ನು ಸ್ವಚ್ಛಗೊಳಿಸಲಾಯಿತು. ಅದೃಷ್ಟವಶಾತ್ ಯಾವುದೇ ಪ್ರಾಣಪಾಯ ಆಗಿಲ್ಲ. ರಿಪ್ಪನ್ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
ಶಿವಮೊಗ್ಗ JNNCE ಕಾಲೇಜಿನಲ್ಲಿ ADMISSION ಶುರು

