ಜಾವಳ್ಳಿ ಬಳಿ ಅಪಘಾತ, ತಾಯಿ, ಮಗನಿಗೆ ಗಾಯ, ಹೇಗಾಯ್ತು ಘಟನೆ?

ಶಿವಮೊಗ್ಗ: ಬೈಕ್ ಮತ್ತು ಟೆಂಪೋ ಟ್ರಾವೆಲರ್ ವಾಹನದ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ತಾಯಿ ಹಾಗೂ ಮಗ ಗಾಯಗೊಂಡಿದ್ದಾರೆ. ಶಿವಮೊಗ್ಗ ತಾಲ್ಲೂಕಿನ ಜಾವಳ್ಳಿ ಗ್ರಾಮದ ಬಳಿ ಘಟನೆ ನಡೆದಿದೆ. ➤ ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.

ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲ್ಲೂಕಿನ ಬೇಲಿ ಮಲ್ಲೂರು ಗ್ರಾಮದ ನಂದೀಶ (21) ಮತ್ತು ಆತನ ತಾಯಿ ಯಶೋದಾ (45) ಗಾಯಗೊಂಡವರು. ನಂದೀಶ ಹಾಗೂ ಯಶೋದಾ ಅವರು ತಮ್ಮ ಬೈಕ್‌ನಲ್ಲಿ ಜಾವಳ್ಳಿ ಗ್ರಾಮದಲ್ಲಿರುವ ಸಂಬಂಧಿಕರ ಮನೆಗೆ ಹೋಗುತ್ತಿದ್ದರು. ಜಾವಳ್ಳಿಯ ಮುಖ್ಯ ರಸ್ತೆಯಿಂದ ಮಸೀದಿ ರಸ್ತೆಯ ಕಡೆಗೆ ಬೈಕ್ ತಿರುಗಿಸುವಾಗ, ಶಿವಮೊಗ್ಗ ಕಡೆಯಿಂದ ಬಂದ ಟೆಂಪೋ ಟ್ರಾವೆಲರ್ ದ್ವಿಚಕ್ರ ವಾಹನಕ್ಕೆ ಮುಖಾಮುಖಿ ಡಿಕ್ಕಿ ಹೊಡೆದಿದೆ.

ACCIDENT-NEWS-GENERAL-IMAGE.

ಅಪಘಾತದ ತೀವ್ರತೆಗೆ ರಸ್ತೆಗೆ ಬಿದ್ದ ತಾಯಿ ಮತ್ತು ಮಗನ ತಲೆ, ಕೈಕಾಲು ಸೇರಿ ವಿವಿಧೆಡೆ ಗಾಯವಾಗಿದ್ದು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಘಟನೆ ಸಂಬಂಧ ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶಿವಮೊಗ್ಗ JNNCE ಕಾಲೇಜಿನಲ್ಲಿ ADMISSION ಶುರು
JNNCE College Admission 2026
📍 ನಿಮ್ಮೂರ ಸುದ್ದಿ
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ.

ಶಿವಮೊಗ್ಗ ಲೈವ್ ಅಪ್ಡೇಟ್ಸ್

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮ ವಾಟ್ಸಪ್ ಗ್ರೂಪ್ ಸೇರಿರಿ!