ಶಿವಮೊಗ್ಗ ಕೋಟೆ ಮಾರಿಕಾಂಬಾ ದೇವಿಗೆ ಸ್ವರ್ಣ ಮುಖ ಕವಚ, ರಜತಾದ್ವಾರ ಸಮರ್ಪಣೆ, ಯಾವಾಗ? ಏನೆಲ್ಲ ಕಾರ್ಯಕ್ರಮ ಇರುತ್ತೆ?

ಶಿವಮೊಗ್ಗ: ನಗರದ ಇತಿಹಾಸ ಪ್ರಸಿದ್ಧ ಕೋಟೆ ಶ್ರೀ ಮಾರಿಕಾಂಬಾ ದೇವಿಗೆ ಸ್ವರ್ಣ ಮುಖ ಕವಚ ಹಾಗೂ ಗರ್ಭಗುಡಿಯ ರಜತಾದ್ವಾರ ಸಮರ್ಪಣಾ ಸಮಾರಂಭವು ಜುಲೈ 3ರಂದು ಮಧ್ಯಾಹ್ನ 12 ಗಂಟೆಗೆ ದೇವಸ್ಥಾನದ ಆವರಣದಲ್ಲಿ ನೆರವೇರಲಿದೆ ಎಂದು ದೇವಸ್ಥಾನ ಸಮಿತಿಯ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ➤ ಸುದ್ದಿಯ ಮುಂದಿನ 5 ಪ್ಯಾರಾಗಳು ಕೆಳಗಿವೆ.

ಹೊರನಾಡು ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನದ ಧರ್ಮದರ್ಶಿ ಡಾ. ಜಿ. ಭೀಮೇಶ್ವರ ಜೋಷಿ ಅವರ ದಿವ್ಯ ಸಾನಿಧ್ಯದಲ್ಲಿ ಹಾಗೂ ಅವರ ಅಮೃತ ಹಸ್ತದಿಂದ ಈ ಸಮರ್ಪಣಾ ಕಾರ್ಯಕ್ರಮ ನಡೆಯಲಿದೆ.

Kote-Marikamba-temple

ವಿವಿಧ ಧಾರ್ಮಿಕ ಕಾರ್ಯಕ್ರಮಗಳು

ಸಮರ್ಪಣಾ ಕಾರ್ಯಕ್ರಮದ ಪೂರ್ವಭಾವಿಯಾಗಿ ಜೂನ್ 30ರಿಂದ ಜುಲೈ 2ರವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು, ಗಣಪತಿ ಪೂಜೆ ಹಾಗೂ ಪುಣ್ಯಾಹವಾಚನ ನೆರವೇರಲಿವೆ. ಜುಲೈ 3ರಂದು ಬೆಳಿಗ್ಗೆ 8.30ಕ್ಕೆ ಗಣಪತಿ ಪೂಜೆಯೊಂದಿಗೆ ಮುಖ್ಯ ಕಾರ್ಯಕ್ರಮಗಳು ಆರಂಭವಾಗಲಿದ್ದು, ದೇವಸ್ಥಾನದ ಪ್ರಧಾನ ಅರ್ಚಕ ಸಂತೋಷ್ ಭಾರದ್ವಾಜ್ ನೇತೃತ್ವದಲ್ಲಿ ಸಾಮೂಹಿಕ ಲಲಿತಾ ಹೋಮ ನಡೆಯಲಿದೆ.

ಬೆಳಿಗ್ಗೆ 11.30ಕ್ಕೆ ಪೂರ್ಣಾಹುತಿ ನೆರವೇರಲಿದ್ದು, ಬಳಿಕ ಅಮ್ಮನವರಿಗೆ ಬಂಗಾರದ ಮುಖ ಕವಚ ಹಾಗೂ ಗರ್ಭಗುಡಿಗೆ ಬೆಳ್ಳಿಯ ದ್ವಾರ ಸಮರ್ಪಿಸಲಾಗುವುದು. ಮಧ್ಯಾಹ್ನ 1 ಗಂಟೆಗೆ ಮಹಾಮಂಗಳಾರತಿ ಹಾಗೂ ಸಭಾ ಕಾರ್ಯಕ್ರಮ ಜರುಗಲಿದೆ.

ಯಾರೆಲ್ಲ ಉಪಸ್ಥಿತಿ ಇರಲಿದ್ದಾರೆ?

ಸಭಾ ಕಾರ್ಯಕ್ರಮದಲ್ಲಿ ಡಾ. ಭೀಮೇಶ್ವರ ಜೋಷಿ ಅವರು ಆಶೀರ್ವಚನ ನೀಡಲಿದ್ದು, ದೇವಸ್ಥಾನ ಸಮಿತಿ ಅಧ್ಯಕ್ಷ ಎಸ್.ಕೆ. ಮರಿಯಪ್ಪ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಶಾಸಕ ಎಸ್.ಎನ್. ಚನ್ನಬಸಪ್ಪ, ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ, ಮಾಜಿ ಶಾಸಕ ಕೆ.ಬಿ. ಪ್ರಸನ್ನ ಕುಮಾರ್ ಹಾಗೂ ಸಮಾಜ ಸೇವಕ ಎಂ. ಶ್ರೀಕಾಂತ್ ಪಾಲ್ಗೊಳ್ಳಲಿದ್ದಾರೆ.

ಲಕ್ಷ ಕುಂಕುಮಾರ್ಚನೆ

ಜೂನ್ 30ರಿಂದ ಜುಲೈ 2ರವರೆಗೆ ಪ್ರತಿದಿನ ಬೆಳಿಗ್ಗೆ 10.30ರಿಂದ 12.30 ಹಾಗೂ ಸಂಜೆ 5.30ರಿಂದ 7.30ರವರೆಗೆ ಮಹಿಳೆಯರಿಗಾಗಿ ಲಲಿತಾ ಸಹಸ್ರನಾಮ ಲಕ್ಷ ಕುಂಕುಮಾರ್ಚನೆ ಹಮ್ಮಿಕೊಳ್ಳಲಾಗಿದೆ. ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಸಮಿತಿ ತಿಳಿಸಿದೆ.

ಶಿವಮೊಗ್ಗ JNNCE ಕಾಲೇಜಿನಲ್ಲಿ ADMISSION ಶುರು
JNNCE College Admission 2026
📍 ನಿಮ್ಮೂರ ಸುದ್ದಿ
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ.

ಶಿವಮೊಗ್ಗ ಲೈವ್ ಅಪ್ಡೇಟ್ಸ್

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮ ವಾಟ್ಸಪ್ ಗ್ರೂಪ್ ಸೇರಿರಿ!