ಭದ್ರಾವತಿ: ತಾಲ್ಲೂಕಿನ ಕೂಡ್ಲಿಗೆರೆಯಲ್ಲಿನ ವಿದ್ಯುತ್ ವಿತರಣಾ ಕೇಂದ್ರ ಹಾಗೂ ವಿದ್ಯುತ್ ಮಾರ್ಗಗಳ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಆದ್ದರಿಂದ ಜುಲೈ 3ರಂದು ಬೆಳಿಗ್ಗೆ 10ರಿಂದ ಸಂಜೆ 6 ಗಂಟೆಯವರೆಗೆ ಭದ್ರಾವತಿ ತಾಲೂಕಿನ ವಿವಿಧ ಗ್ರಾಮಗಳಲ್ಲಿ ವಿದ್ಯುತ್ ಸರಬರಾಜು ಇರುವುದಿಲ್ಲ ಎಂದು ಮೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ➤ ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ.
ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ?
ಕೂಡ್ಲಿಗೆರೆ, ಬದನೆಹಾಳ್, ಬೆಳ್ಳಿಗೆರೆ, ಬಂಡಿಗುಡ್ಡ, ಹೊಸಹಳ್ಳಿ, ಕಲ್ಪನಹಳ್ಳಿ, ಅರಳಿಹಳ್ಳಿ, ಅತ್ತಿಗುಂದ, ಗುಡ್ಡದನೇರಲೆಕೆರೆ, ಕೊಮಾರನಹಳ್ಳಿ, ಕುಮರಿ ನಾರಾಯಣಪುರ, ಸೀತಾರಾಂಪುರ, ಸಿದ್ಧರಮಟ್ಟಿ, ದೇವರಹಳ್ಳಿ, ಸಂಜೀವನಗರ, ಜಯನಗರ, ತಿಪ್ಪಾಪುರ, ಬಸಲೀಕಟ್ಟೆ, ಕಲ್ಲಾಪುರ, ದಾನವಾಡಿ, ಡಿ.ಬಿ. ಹಳ್ಳಿ, ಅರಕೆರೆ, ಮಾರಶೆಟ್ಟಿಹಳ್ಳಿ, ಕಲ್ಲಿಹಾಳ್, ಅರಬಿಳಚಿ, ತಿಮ್ಲಾಪುರ, ತಟ್ಟೆಹಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮೀಣ ಪ್ರದೇಶಗಳು.

ಶಿವಮೊಗ್ಗ JNNCE ಕಾಲೇಜಿನಲ್ಲಿ ADMISSION ಶುರು

