ಅನುಪಿನಕಟ್ಟೆ ತುಂಗಾ ಚಾನಲ್‌ ಬಳಿ ಪೊಲೀಸ್‌ ದಾಳಿ, ಇಬ್ಬರು ಅರೆಸ್ಟ್‌, ಏನಿದು ಪ್ರಕರಣ?

ಶಿವಮೊಗ್ಗ: ಅನುಪಿನಕಟ್ಟೆ ರಸ್ತೆಯ ತುಂಗಾ ಮೇಲ್ದಂಡೆ ಚಾನಲ್ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರ ಮೇಲೆ ಪೊಲೀಸರು ದಾಳಿ ನಡೆಸಿ ಬಂಧಿಸಿದ್ದಾರೆ. ➤ ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.

ಬಂಧಿತರನ್ನು ಸೈಯ್ಯದ್ ಅಹಮ್ಮದ್ ಅಲಿಯಾಸ್ ಗುಡ್ಡು (24) ಮತ್ತು ಮಲ್ಲಿಕ್ ಅಲಿಯಾಸ್ ತಬ್ರೇಜ್ (22) ಎಂದು ಗುರುತಿಸಲಾಗಿದೆ.

Two-arrested-near-anupinakatte-in-Shimoga

ಖಚಿತ ಮಾಹಿತಿ ಮೇರೆಗೆ ದಾಳಿ

ತುಂಗಾ ಚಾನಲ್ ಹತ್ತಿರ ಗಾಂಜಾ ಮಾರಾಟ ಮಾಡುತ್ತಿರುವ ಬಗ್ಗೆ ಮಾಹಿತಿ ಹಿನ್ನೆಲೆ ತುಂಗಾ ನಗರ ಠಾಣೆ ಪೊಲೀಸರು ದಾಳಿ ನಡೆಸಿದರು. ಆರೋಪಿಗಳನ್ನು ವಶಕ್ಕೆ ಪಡೆದು ಅವರಿಂದ ₹60,000 ಮೌಲ್ಯದ 1 ಕೆಜಿ 270 ಗ್ರಾಂ ತೂಕದ ಗಾಂಜಾ ಹಾಗೂ ₹600 ನಗದನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಪೊಲೀಸ್‌ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಶಿವಮೊಗ್ಗ JNNCE ಕಾಲೇಜಿನಲ್ಲಿ ADMISSION ಶುರು
JNNCE College Admission 2026
📍 ನಿಮ್ಮೂರ ಸುದ್ದಿ
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ.

ಶಿವಮೊಗ್ಗ ಲೈವ್ ಅಪ್ಡೇಟ್ಸ್

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮ ವಾಟ್ಸಪ್ ಗ್ರೂಪ್ ಸೇರಿರಿ!