ಶಿವಮೊಗ್ಗ: ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಮಹಿಳೆಯ ಕುತ್ತಿಗೆಯಿಂದ ₹1.60 ಲಕ್ಷ ಮೌಲ್ಯದ ಬಂಗಾರದ ಸರ ಕಳ್ಳತನವಾಗಿದೆ. ಶಿವಮೊಗ್ಗದ ವಿದ್ಯಾನಗರದಲ್ಲಿ ಘಟನೆ ನಡೆದಿದೆ. ➤ ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.
ವಿದ್ಯಾನಗರ ನಿವಾಸಿ, ಖಾಸಗಿ ಸಂಸ್ಥೆ ನೌಕರರಾದ ಯಲ್ಲಮ್ಮ (65) ಚಿನ್ನದ ಸರ ಕಳೆದುಕೊಂಡಿದ್ದಾರೆ. ಯಲ್ಲಮ್ಮ ಹೊಳೆ ಬಸ್ ನಿಲ್ದಾಣದ ಬಳಿ ಇರುವ ಮಂಜುಶ್ರೀ ದಂತ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದಾರೆ. ಜೂನ್ 27ರಂದು ರಾತ್ರಿ ಕೆಲಸ ಮುಗಿಸಿ ಮನೆಗೆ ವಾಪಸಾಗಿದ್ದರು. ಮನೆಗೆ ಬಂದ ಸಂಬಂಧಿಯೊಬ್ಬರು ಯಲ್ಲಮ್ಮ ಅವರ ಕುತ್ತಿಗೆಯನ್ನು ಗಮನಿಸಿದಾಗ ಸರ ಇಲ್ಲದಿರುವುದು ಬೆಳಕಿಗೆ ಬಂದಿದೆ.

ಕುತ್ತಿಗೆಯಲ್ಲಿದ್ದ 30 ಗ್ರಾಂ ತೂಕದ ಚಿನ್ನದ ಸರ ಕಾಣೆಯಾಗಿರುವುದನ್ನು ಕಂಡು ಆತಂಕಗೊಂಡ ಮಹಿಳೆ, ತಾವು ಓಡಾಡಿದ ಜಾಗ ಹಾಗೂ ಆಸ್ಪತ್ರೆಯ ಸುತ್ತಮುತ್ತ ಹುಡುಕಾಡಿದ್ದಾರೆ. ಆದರೆ ಸರ ಪತ್ತೆಯಾಗಿಲ್ಲ. ಚಿನ್ನದ ಸರ ಕಳ್ಳತನ ಮಾಡಲಾಗಿದ ಎಂದು ಆರೋಪಿಸಲಾಗಿದೆ. ಘಟನೆ ಸಂಬಂಧ ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
