ಸಾಗರ: ಶಿವಮೊಗ್ಗ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿರುವ ಹಿನ್ನೆಲೆ, ಮುನ್ನೆಚ್ಚರಿಕಾ ಕ್ರಮವಾಗಿ ಸಾಗರದ ಜೆಎಂಎಫ್ಸಿ ನ್ಯಾಯಾಲಯದ ಆವರಣದಲ್ಲಿ ಶನಿವಾರ ಬೆಳಿಗ್ಗೆ ಬಾಂಬ್ ಪತ್ತೆ ದಳ ಮತ್ತು ಶ್ವಾನ ದಳ ತಪಾಸಣೆ ನಡೆಸಿತು. ➤ ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.
ನ್ಯಾಯಾಲಯದ ಕಚೇರಿಗಳು, ಕೊಠಡಿಗಳು ಹಾಗೂ ಆವರಣದ ಮೂಲೆ ಮೂಲೆಗಳಲ್ಲಿ ಕೂಲಂಕಷವಾಗಿ ಪರಿಶೀಲನೆ ನಡೆಸಿದರು. ದಿಢೀರ್ ತಪಾಸಣೆಯಿಂದಾಗಿ ನ್ಯಾಯಾಲಯದ ಸಿಬ್ಬಂದಿ ಮತ್ತು ವಕೀಲರಲ್ಲಿ ಕೆಲಕಾಲ ಆತಂಕದ ವಾತಾವರಣ ಉಂಟಾಗಿತ್ತು.

ರಾಜ್ಯದ ವಿವಿಧ ನ್ಯಾಯಾಲಯಗಳಿಗೆ ಇ-ಮೇಲ್ ಮೂಲಕ ಪದೇ ಪದೆ ಹುಸಿ ಬಾಂಬ್ ಬೆದರಿಕೆಗಳು ಬರುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ನಿಖಿಲ್, ನ್ಯಾಯಾಲಯಗಳ ಭದ್ರತೆ ಹೆಚ್ಚಿಸಲು ಸೂಚನೆ ನೀಡಿದ್ದಾರೆ.
ಶಿವಮೊಗ್ಗ JNNCE ಕಾಲೇಜಿನಲ್ಲಿ ADMISSION ಶುರು

