ಶಿವಮೊಗ್ಗದ 30ಕ್ಕೂ ಹೆಚ್ಚು ಕಡೆ ಜುಲೈ 5ರಂದು ಕರೆಂಟ್‌ ಇರಲ್ಲ, ಎಲ್ಲೆಲ್ಲಿ? ಇಲ್ಲಿದೆ ಲಿಸ್ಟ್

ಶಿವಮೊಗ್ಗ: ನಗರದಾದ್ಯಂತ ಸ್ಪಿನ್ ಪೋಲ್ ಶಿಫ್ಟಿಂಗ್, ತುರ್ತು ನಿರ್ವಹಣೆ ಹಾಗೂ ರಸ್ತೆ ಅಗಲೀಕರಣ ಕಾಮಗಾರಿಗಳನ್ನು ಹಮ್ಮಿಕೊಂಡಿರುವುದರಿಂದ ಜುಲೈ 5ರ ಶಿವಮೊಗ್ಗ ನಗರ, ಉಪನಗರ ಹಾಗೂ ಮಾಚೇನಹಳ್ಳಿ ಕೈಗಾರಿಕಾ ಪ್ರದೇಶ ಸೇರಿ ಸುತ್ತಮುತ್ತಲಿನ ಹಲವು ಪ್ರದೇಶಗಳ್ಲಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ➤ ಸುದ್ದಿಯ ಮುಂದಿನ 4 ಪ್ಯಾರಾಗಳು ಕೆಳಗಿವೆ.

ಎಲ್ಲೆಲ್ಲಿ ಕರೆಂಟ್‌ ಇರಲ್ಲ? ಕಾರಣವೇನು?

ಕೆ.ಇ.ಬಿ ವೃತ್ತದ ಸುತ್ತಮುತ್ತ: ನಗರದ ಕೆ.ಇ.ಬಿ ವೃತ್ತದ ಹತ್ತಿರ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಜುಲೈ 5ರಂದು ಕೆ.ಇ.ಬಿ ಸರ್ಕಲ್, ಬಾಪೂಜಿ ನಗರ, ರೈಲ್ವೆ ಸ್ಟೇಷನ್ ರಸ್ತೆ ಹಾಗೂ ಇದರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆ ಸ್ಥಗಿತಗೊಳ್ಳಲಿದೆ ಎಂದು ಶಿವಮೊಗ್ಗ ನಗರ ಉಪ ವಿಭಾಗ-1ರ ಮೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ತಿಳಿಸಿದ್ದಾರೆ.

power cut mescom ELECTRICITY

ಬೆಳಿಗ್ಗೆ 9 ರಿಂದ ಸಂಜೆ 4 ರವರೆಗೆ: ಮೆಸ್ಕಾಂ ಉಪವಿಭಾಗ-2, ಘಟಕ-6ರ ವ್ಯಾಪ್ತಿಯಲ್ಲಿ ವಿದ್ಯುತ್ ಲೈನ್‌ಗಳ ದುರಸ್ತಿ ಇರುವುದರಿಂದ ಗೋಪಿಶೆಟ್ಟಿಕೊಪ್ಪ, ಸಿದ್ದೇಶ್ವರ ಸರ್ಕಲ್, ಚಾಲುಕ್ಯನಗರ, ಮಂಜಪ್ಪ ಬಸಪ್ಪ ಲೇಔಟ್, ಗದ್ದೆಮನೆ ಲೇಔಟ್, ಭರತ್ ಎಂಟರ್‌ಪ್ರೈಸಸ್, ಆಶ್ರಯ ಬಡಾವಣೆ, ಆನಂದಗಿರಿ ಬಡಾವಣೆ, ಮಲ್ಲಿಕಾರ್ಜುನ ಬಡಾವಣೆ, ವಿನಾಯಕ ಸರ್ಕಲ್, ಜಿ.ಎಸ್. ಕಾಸ್ಟಿಂಗ್, ಸೋಮಣ್ಣ ಫ್ಯಾಕ್ಟರಿ, ಸಲೀಮ್ ಫ್ಯಾಕ್ಟರಿ, 100 ಅಡಿ ರಸ್ತೆ, ಕಾಮತ್ ಲೇಔಟ್, ಮೇಲಿನ ತುಂಗಾನಗರ, ಇಲಿಯಾಜ್ ನಗರ ಚಾನಲ್ ಏರಿಯಾ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕರೆಂಟ್ ಇರುವುದಿಲ್ಲ.

ಬೆಳಿಗ್ಗೆ 10 ರಿಂದ ಸಂಜೆ 5 ರವರೆಗೆ: ಮಾಚೇನಹಳ್ಳಿ 110/11 ಕೆ.ವಿ. ವಿದ್ಯುತ್ ವಿತರಣಾ ಕೇಂದ್ರದ ಮಾರ್ಗಗಳಲ್ಲಿ ರಸ್ತೆ ಕಾಮಗಾರಿ ಇರುವುದರಿಂದ ಮಾಚೇನಹಳ್ಳಿ, ಬಿದರೆ, ನಿದಿಗೆ, ಓತಿಘಟ್ಟ, ಸಿದ್ದರಗುಡಿ, ಹಾರೇಕಟ್ಟೆ, ಸೋಗಾನೆ, ಆಚಾರಿ ಕ್ಯಾಂಪ್, ಹೊಸೂರು ರೆಡ್ಡಿಕ್ಯಾಂಪ್, ದುಮ್ಮಳ್ಳಿ, ಶುಗರ್ ಕಾಲೋನಿ.

ಜಯಂತಿಗ್ರಾಮ, ಹೊನ್ನವಿಲೆ, ಜಿಲ್ಲಾ ಕೇಂದ್ರ ಕಾರಾಗೃಹ, ಕಿಯೋನಿಕ್ಸ್ ಐಟಿ ಪಾರ್ಕ್, ಮಲ್ನಾಡ್ ಆಸ್ಪತ್ರೆ, ಕೆ.ಎಸ್.ಆರ್.ಪಿ ಕಾಲೋನಿ, ನವುಲೆ ಬಸವಾಪುರ, ಮೆ. ಈ.ರಾಮಮೂರ್ತಿ ಮಿನರಲ್ಸ್ ಪ್ರೈ.ಲಿ., ಕೆ.ಎಂ.ಎಫ್.ಡೈರಿ, ಶೆಟ್ಟಿಹಳ್ಳಿ, ಮಾಳೇನಹಳ್ಳಿ, ಗುಡ್ರಕೊಪ್ಪ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಗ್ರಾಹಕರು ಸಹಕರಿಸಬೇಕೆಂದು ಮೆಸ್ಕಾಂ ಪ್ರಕಟಣೆ ಕೋರಿದೆ.

ಶಿವಮೊಗ್ಗ JNNCE ಕಾಲೇಜಿನಲ್ಲಿ ADMISSION ಶುರು
JNNCE College Admission 2026
📍 ನಿಮ್ಮೂರ ಸುದ್ದಿ
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ.

ಶಿವಮೊಗ್ಗ ಲೈವ್ ಅಪ್ಡೇಟ್ಸ್

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮ ವಾಟ್ಸಪ್ ಗ್ರೂಪ್ ಸೇರಿರಿ!