ವಿದ್ಯಾರ್ಥಿಗಳ ಗಮನಕ್ಕೆ: ಬಸ್‌ ಪಾಸ್‌ ಹಣ ವಾಪಸ್‌ ನೀಡ್ತಿದೆ KSRTC, ಅರ್ಜಿ ಸಲ್ಲಿಕೆ ಕುರಿತು ಇಲ್ಲಿದೆ ಮಾಹಿತಿ

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಶಿವಮೊಗ್ಗ: ರಾಜ್ಯ ರಸ್ತೆ ಸಾರಿಗೆ ನಿಗಮವು 2026-27ನೇ ಶೈಕ್ಷಣಿಕ ಸಾಲಿನ ವಿದ್ಯಾರ್ಥಿ ಉಚಿತ, ರಿಯಾಯಿತಿ ಬಸ್‌ಪಾಸ್ ವಿತರಣಾ ಕಾರ್ಯ ಆರಂಭಿಸಿದೆ. ನಿಗಮದ ವಾಹನಗಳಲ್ಲಿ ಪ್ರಯಾಣಿಸುವ ರಾಜ್ಯದ ಶಾಲಾ ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಜೂ.12ರಿಂದ ಉಚಿತ ಬಸ್ ಪಾಸ್ ವಿತರಿಸಲಾಗುತ್ತಿದೆ. ಈಗಾಗಲೇ ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಶುಲ್ಕ ಪಡೆದು ವಿತರಿಸಲಾದ ಪಾಸ್‌ಗಳ ಸಂಪೂರ್ಣ ಶುಲ್ಕವನ್ನು ಅರ್ಜಿ ಸಲ್ಲಿಸಿದ 7 ದಿನಗಳೊಳಗಾಗಿ ವಿದ್ಯಾರ್ಥಿಗಳಿಗೆ ಮರುಪಾವತಿ ಮಾಡಲಾಗುವುದು ಎಂದು ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.

ಶುಲ್ಕ ಪಾವತಿಸಿ ಬಸ್ ಪಾಸ್‌ಗಳನ್ನು ಪಡೆದಿರುವ ವಿದ್ಯಾರ್ಥಿಗಳು ಶುಲ್ಕ ಮರು ಪಾವತಿಗಾಗಿ ಸೇವಾಸಿಂಧು https://sevasindhuservices.karnataka. gov.in/buspassservices/ ಪೋರ್ಟಲ್‌ನಲ್ಲಿ ಒದಗಿಸಿರುವ ಲಿಂಕ್ ಮೂಲಕ ಮೊಬೈಲ್ ಸಂಖ್ಯೆ, ಒಟಿಪಿ ನಮೂದಿಸಿ ಅರ್ಜಿ ಸಲ್ಲಿಸಬೇಕು. ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ.

ವಿದ್ಯಾರ್ಥಿಗಳು ಆಧಾರ್ ಆಧಾರಿತ ಇ-ಕೆವೈಸಿ ಪೂರ್ಣಗೊಳಿಸಿರಬೇಕು. ತಮ್ಮ ಅಥವಾ ಪೋಷಕರ ಬ್ಯಾಂಕ್ ಖಾತೆ ವಿವರಗಳನ್ನು ತಂತ್ರಾಂಶದಲ್ಲಿ ನಮೂದಿಸಬೇಕು. ವಿದ್ಯಾರ್ಥಿಗಳು ಈ ಸಂಬಂಧ ಯಾವುದೇ ಕೌಂಟರ್‌ಗೆ ಭೇಟಿ ನೀಡುವ ಅವಶ್ಯಕತೆ ಇಲ್ಲ ಎಂದು ತಿಳಿಸಿದ್ದಾರೆ.

ksrtc-news-update-thumbnail.webp