ಶಿವಮೊಗ್ಗದ ಜಯನಗರ ಪೊಲೀಸ್ ಠಾಣೆಗೆ ಐಜಿಪಿ ಭೇಟಿ, ಪರಿಶೀಲನೆ

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ವಾಟ್ಸಪ್‌ ಮಾಡಲು ಕೆಳಗಿರುವ ನಂಬರ್‌ ಮೇಲೆ ಕ್ಲಿಕ್‌ ಮಾಡಿ.

ಶಿವಮೊಗ್ಗ: ದಾವಣಗೆರೆ ಪೂರ್ವ ವಲಯದ ಐಜಿಪಿ ಡಾ. ಬಿ.ಆರ್. ರವಿಕಾಂತೇಗೌಡ ನಗರದ ಜಯನಗರ ಪೊಲೀಸ್ ಠಾಣೆಯ ವಾರ್ಷಿಕ ಪರಿವೀಕ್ಷಣೆ ನಡೆಸಿದರು. ➤ ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.

ಠಾಣೆಗೆ ಆಗಮಿಸಿದ ರವಿಕಾಂತೇಗೌಡ ಗೌರವ ವಂದನೆ ಸ್ವೀಕರಿಸಿದರು. ಠಾಣೆಯ ಕಾರ್ಯವೈಖರಿ, ಪ್ರಮುಖ ಕಡತಗಳ ನಿರ್ವಹಣೆ, ಅಪರಾಧ ದಾಖಲಾತಿ ಹಾಗೂ ಇತರೆ ಪ್ರಮುಖ ವಿಷಯಗಳನ್ನು ಕೂಲಂಕಷವಾಗಿ ಪರಿಶೀಲಿಸಿದರು.

IGP-Ravikanthe-Gowda-Visit-Jayanagara-Police-Station

ಇದೇ ಸಂದರ್ಭ ಅಧಿಕಾರಿಗಳು ಮತ್ತು ಸಿಬ್ಬಂದಿಯ ಕುಂದುಕೊರತೆ ಆಲಿಸಿದ ಅವರು, ಸಾರ್ವಜನಿಕರ ರಕ್ಷಣೆಗೆ ಆದ್ಯತೆ ನೀಡಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಉತ್ತಮವಾಗಿ ಕರ್ತವ್ಯ ನಿರ್ವಹಿಸುವ ಸಂಬಂಧ ಸಲಹೆ ನೀಡಿದರು. ಜಿಲ್ಲಾ ರಕ್ಷಣಾಧಿಕಾರಿ ನಿಖಿಲ್.ಬಿ, ಡಿವೈಎಸ್‌ಪಿ ಸಂಜೀವ್‌ ಕುಮಾರ್‌, ಜಯನಗರ ಠಾಣೆ ಇನ್ಸ್‌ಪೆಕ್ಟರ್‌ ರವಿ ಪಾಟೀಲ್‌, ಸಿ.ಇ.ಎನ್‌ ಠಾಣೆ ಇನ್ಸ್‌ಪೆಕ್ಟರ್‌ ಮಂಜುನಾಥ್‌, ಎರಡು ಠಾಣೆಗಳ ಸಿಬ್ಬಂದಿ ಇದ್ದರು.

ಶಿವಮೊಗ್ಗ ಲೈವ್ ಅಪ್ಡೇಟ್ಸ್

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮ ವಾಟ್ಸಪ್ ಗ್ರೂಪ್ ಸೇರಿರಿ!