ಮಾಲತಿ ನದಿಯಲ್ಲಿ ವೃದ್ಧ ಕೊಚ್ಚಿ ಹೋಗಿರುವ ಶಂಕೆ, ಶೋಧ ಕಾರ್ಯ, ಅನುಮಾನಕ್ಕೆ ಕಾರಣವೇನು?

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ವಾಟ್ಸಪ್‌ ಮಾಡಲು ಕೆಳಗಿರುವ ನಂಬರ್‌ ಮೇಲೆ ಕ್ಲಿಕ್‌ ಮಾಡಿ.

ತೀರ್ಥಹಳ್ಳಿ: ತಾಲ್ಲೂಕಿನ ಅರೆಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೇಳೂರು ಗ್ರಾಮದ ಸಮೀಪ ಭಾರಿ ಮಳೆಯಿಂದಾಗಿ ರಭಸವಾಗಿ ಹರಿಯುತ್ತಿರುವ ಮಾಲತಿ ನದಿಯಲ್ಲಿ ವೃದ್ಧರೊಬ್ಬರು ಕೊಚ್ಚಿಹೋಗಿರುವ ಶಂಕೆ ವ್ಯಕ್ತವಾಗಿದೆ. ➤ ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ.

ಕೇಳೂರು ಗ್ರಾಮದ ನಿವಾಸಿ ರಾಮಪ್ಪ (65) ಭಾನುವಾರ ಸಂಜೆಯಿಂದ ಕಾಣೆಯಾಗಿದ್ದಾರೆ. ಇವರ ಚಪ್ಪಲಿ, ಬಟ್ಟೆ ಹಾಗೂ ರೈನ್‌ಕೋಟ್ ನದಿ ದಡದಲ್ಲಿ ಪತ್ತೆಯಾಗಿವೆ. ಇವರು ನದಿ ನೀರಿನಲ್ಲಿ ಕೊಚ್ಚಿಹೋಗಿರಬಹುದು ಎಂಬ ಅನುಮಾನಕ್ಕೆ ಕಾರಣವಾಗಿದೆ. ರಾಮಪ್ಪ ಅವರ ಪತ್ತೆಗಾಗಿ ಸ್ಥಳೀಯರು ಹಾಗೂ ರಕ್ಷಣಾ ಸಿಬ್ಬಂದಿ ನದಿ ಪಾತ್ರದಲ್ಲಿ ಶೋಧ ಕಾರ್ಯ ನಡೆಸುತ್ತಿದ್ದಾರೆ.

Serach-for-man-at-Malathi-River-in-Thirthahalli.

ಶಿವಮೊಗ್ಗ ಲೈವ್ ಅಪ್ಡೇಟ್ಸ್

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮ ವಾಟ್ಸಪ್ ಗ್ರೂಪ್ ಸೇರಿರಿ!