ಶಿವಮೊಗ್ಗ: ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯು 2026-27ನೇ ಸಾಲಿಗೆ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಶೈಕ್ಷಣಿಕವಾಗಿ ಉತ್ತೇಜನ ನೀಡಲು ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನಿಸಿದೆ. ➤ ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ.
ಅರ್ಹ ವಿದ್ಯಾರ್ಥಿಗಳು ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶ (ಎಸ್ಎಸ್‌ಪಿ)ದ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಹ ಫಲಾನುಭವಿಗಳು ಈ ಸೌಲಭ್ಯವನ್ನು ಪಡೆದುಕೊಳ್ಳುವಂತೆ ತಿಳಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಕಚೇರಿ ವೇಳೆಯಲ್ಲಿ ದೂರವಾಣಿ ಸಂಖ್ಯೆ: 08182-200266 ಅಥವಾ ಶಿವಮೊಗ್ಗ, ಸಾಗರ, ಸೊರಬ, ಶಿಕಾರಿಪುರ, ಭದ್ರಾವತಿ, ಹೊಸನಗರ ಮತ್ತು ತೀರ್ಥಹಳ್ಳಿಯ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಎಸ್.ಜಿ. ಶ್ರೀನಿವಾಸ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ:➤ ಸಹ್ಯಾದ್ರಿ ಕಾಲೇಜು: ಕುವೆಂಪು ವಿವಿ ನಿರ್ಧಾರ ಬದಲಿಸದಿದ್ದರೆ ಪ್ರತಿಭಟನೆ ಎಚ್ಚರಿಕೆ ನೀಡಿದ MLA, ಯಾಕೆ?