ಶಿವಮೊಗ್ಗದಲ್ಲಿ ಲೋಕಾಯುಕ್ತ ದಾಳಿ: ಅರಣ್ಯ ಇಲಾಖೆ ಕಚೇರಿಯಲ್ಲಿ ದಾಖಲೆಗಳ ಪರಿಶೀಲನೆ

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ವಾಟ್ಸಪ್‌ ಮಾಡಲು ಕೆಳಗಿರುವ ನಂಬರ್‌ ಮೇಲೆ ಕ್ಲಿಕ್‌ ಮಾಡಿ.

ಶಿವಮೊಗ್ಗ: ಆದಾಯ ಮೀರಿ ಆಸ್ತಿ ಗಳಿಕೆ ಮಾಡಿರುವ ಆರೋಪದ ಹಿನ್ನೆಲೆ ಅರಣ್ಯ ಇಲಾಖೆಯ ಸಂಶೋಧನೆ ಮತ್ತು ಅಭಿವೃದ್ಧಿ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ (ಎಸಿಎಫ್) ಕಿರಣ್ ಅಂಗಡಿ ಅವರ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ಇಂದು ದಾಳಿ ನಡೆಸಿದ್ದಾರೆ. ➤ ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.

ನಗರದ ಆಲ್ಕೊಳ ವೃತ್ತದ ಬಳಿ ಇರುವ ಸಾಮಾಜಿಕ ಅರಣ್ಯ ವಲಯ ಕಚೇರಿ ಪಕ್ಕದ ಸಂಶೋಧನಾ ವಿಭಾಗದ ಎಸಿಎಫ್ ಕಚೇರಿಯ ಮೇಲೆ ದಾಳಿ ನಡೆಸಲಾಗಿದೆ. ಬೆಳಿಗ್ಗೆಯಿಂದಲೇ ಕಚೇರಿಯಲ್ಲಿ ಅಧಿಕಾರಿಗಳು ಪ್ರಮುಖ ಕಡತಗಳು ಹಾಗೂ ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ.

Lokayukta-Raid-at-Alkola-Forest-office.

ಲೋಕಾಯುಕ್ತ ಎಸ್‌ಪಿ ಅವರ ಮಾರ್ಗದರ್ಶನದಲ್ಲಿ, ಇನ್‌ಸ್ಪೆಕ್ಟರ್ ರುದ್ರೇಶ್ ನೇತೃತ್ವದಲ್ಲಿ ಹತ್ತಕ್ಕೂ ಹೆಚ್ಚು ಅಧಿಕಾರಿಗಳು ಮತ್ತು ಸಿಬ್ಬಂದಿ ಒಳಗೊಂಡ ತಂಡ ಈ ಕಾರ್ಯಾಚರಣೆ ನಡೆಸಿದೆ. ಕಚೇರಿಯಲ್ಲಿ ದಾಖಲಾತಿ ಪರಿಶೀಲನೆ ಮುಂದುವರಿದಿದೆ.

ಶಿವಮೊಗ್ಗ ಲೈವ್ ಅಪ್ಡೇಟ್ಸ್

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮ ವಾಟ್ಸಪ್ ಗ್ರೂಪ್ ಸೇರಿರಿ!