ಶಿವಮೊಗ್ಗ: ನಗರದ ಕೃಷ್ಣರಾಜೇಂದ್ರ ಜಲಶುದ್ಧೀಕರಣ ಘಟಕದಲ್ಲಿ ದುರಸ್ತಿ ಕಾಮಗಾರಿ ಕೈಗೊಂಡಿರುವುದರಿಂದ ಶಿವಮೊಗ್ಗ ನಗರದಾದ್ಯಂತ ದೈನಂದಿನ ಕುಡಿಯುವ ನೀರಿನ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ➤ ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ.
ಘಟಕದಲ್ಲಿರುವ ಕ್ಲಾರಿಫ್ಲೋಕ್ಯೂಲೇಟರ್‌ನಲ್ಲಿ ನೀರು ಸೋರಿಕೆಯಾಗುತ್ತಿದೆ. ತಕ್ಷಣವೇ ದುರಸ್ತಿ ಕಾಮಗಾರಿ ಆರಂಭಿಸಲಾಗಿದೆ. ಈ ಹಿನ್ನೆಲೆ ಕಾಮಗಾರಿ ಪೂರ್ಣಗೊಳ್ಳುವವರೆಗೂ ನೀರಿನ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಪರಿಸ್ಥಿತಿ ಅರಿತು ಮಿತವಾಗಿ ನೀರು ಬಳಸಬೇಕು ಹಾಗೂ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯೊಂದಿಗೆ ಸಹಕರಿಸಬೇಕು ಎಂದು ಮಂಡಳಿಯ ನಿರ್ವಹಣೆ ಮತ್ತು ಪಾಲನೆ ಉಪ-ವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
