ಸಾಗರದಲ್ಲಿ ಪೊಲೀಸರ ದಾಳಿ, ಪೆಡ್ಲರ್‌ ಅರೆಸ್ಟ್‌. ಏನಿದು ಕೇಸ್‌?

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ವಾಟ್ಸಪ್‌ ಮಾಡಲು ಕೆಳಗಿರುವ ನಂಬರ್‌ ಮೇಲೆ ಕ್ಲಿಕ್‌ ಮಾಡಿ.

ಸಾಗರ: ನಗರದ ಕೃಷ್ಣ ಗ್ಯಾರೇಜ್ ರಸ್ತೆಯ ಗೋದಾಮಿನಲ್ಲಿ ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಸಾಗರ ಟೌನ್ ಪೊಲೀಸರು ದಾಳಿ ನಡೆಸಿ ಬಂಧಿಸಿದ್ದಾರೆ. ➤ ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ.

ಅಕ್ಬರ್ ಬೇಗ್ (40) ಬಂಧಿತ ಆರೋಪಿ. ಈತ ಗೋದಾಮಿನಲ್ಲಿ ಮಾದಕ ವಸ್ತು ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಸಾಗರ ಟೌನ್ ಪೊಲೀಸ್ ಇನ್ಸ್‌ಪೆಕ್ಟರ್ ಅವರು ಸಿಬ್ಬಂದಿಯೊಂದಿಗೆ ದಾಳಿ ನಡೆಸಿದ್ದಾರೆ. ಬಂಧಿತನಿಂದ ₹7,500 ಮೌಲ್ಯದ 156 ಗ್ರಾಂ ಗಾಂಜಾ ಹಾಗೂ ₹25,000 ಮೌಲ್ಯದ 10 ಗ್ರಾಂ 750 ಮಿಲಿ ಗ್ರಾಂ ತೂಕದ ಎಂಡಿಎಂಎ ಮಾದಕ ವಸ್ತುವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಈ ಸಂಬಂಧ ಸಾಗರ ಟೌನ್ ಪೊಲೀಸ್ ಠಾಣೆಯಲ್ಲಿ ಎನ್‌ಡಿಪಿಎಸ್ (NDPS) ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

Sagara-Police-Arrest-a-person-in-NDPS-Case

ಶಿವಮೊಗ್ಗ ಲೈವ್ ಅಪ್ಡೇಟ್ಸ್

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮ ವಾಟ್ಸಪ್ ಗ್ರೂಪ್ ಸೇರಿರಿ!