ತೋಟದಲ್ಲಿ ತೆಂಗಿನಕಾಯಿ ಕೀಳುವಾಗ ವಿದ್ಯುತ್ ತಂತಿ ತಗುಲಿ ರೈತ ಸಾವು

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ವಾಟ್ಸಪ್‌ ಮಾಡಲು ಕೆಳಗಿರುವ ನಂಬರ್‌ ಮೇಲೆ ಕ್ಲಿಕ್‌ ಮಾಡಿ.

NEWS HIGHLIGHTS

ಹೊಳೆಹೊನ್ನೂರು: ತೋಟದಲ್ಲಿ ತೆಂಗಿನಕಾಯಿ ಕೀಳುತ್ತಿದ್ದ ವೇಳೆ ವಿದ್ಯುತ್ ತಂತಿ ಆಕಸ್ಮಿಕವಾಗಿ ಸ್ಪರ್ಶಿಸಿದ ಪರಿಣಾಮ ರೈತರೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಶಿವಮೊಗ್ಗ ತಾಲ್ಲೂಕಿನ ಬುಳ್ಳಾಪುರ ಗ್ರಾಮದಲ್ಲಿ ಘಟನೆ ನಡೆದಿದೆ.

➤ ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ.

ಬುಳ್ಳಾಪುರದ ಬಸವರಾಜಪ್ಪ ಗೌಡ (55) ಮೃತ ರೈತ. ತಮ್ಮ ತೋಟದಲ್ಲಿ ಫೈಬರ್ ದೋಟಿ ಬಳಸಿ ತೆಂಗಿನಕಾಯಿ ಕೀಳುತ್ತಿದ್ದರು. ಈ ವೇಳೆ ತೋಟದ ಮೇಲ್ಭಾಗದಲ್ಲಿ ಹಾದುಹೋಗಿದ್ದ ವಿದ್ಯುತ್ ಲೈನ್‌ಗೆ ದೋಟಿ ಆಕಸ್ಮಿಕವಾಗಿ ತಗುಲಿದೆ. ವಿದ್ಯುತ್ ಪ್ರವಹಿಸಿದ ಪರಿಣಾಮ ಬಸವರಾಜಪ್ಪ ಗೌಡ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಹೊಳೆಹೊನ್ನೂರು ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

holehonnur name graphics

ಶಿವಮೊಗ್ಗ ಲೈವ್ ಅಪ್ಡೇಟ್ಸ್

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮ ವಾಟ್ಸಪ್ ಗ್ರೂಪ್ ಸೇರಿರಿ!