ಮೆಗ್ಗಾನ್‌ ಆಸ್ಪತ್ರೆ ಕ್ಯಾಂಟೀನ್‌ನಲ್ಲಿ ದುಡ್ಡು ಕೊಡಲು ಬ್ಯಾಗ್‌ ತೆಗೆದ ವೃದ್ಧೆಗೆ ದಿಗ್ಭ್ರಮೆ, ದಾಖಲಾಯ್ತು ಕೇಸ್‌

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

NEWS HIGHLIGHTS

ಶಿವಮೊಗ್ಗ: ಮೆಗ್ಗಾನ್ ಆಸ್ಪತ್ರೆಗೆ ಬಂದಿದ್ದ ವೃದ್ಧೆಯೊಬ್ಬರ ಬ್ಯಾಗ್‌ನಿಂದ ₹1.20 ಲಕ್ಷ ಮೌಲ್ಯದ ಚಿನ್ನದ ಮಾಂಗಲ್ಯ ಸರ ಕಳ್ಳತನವಾಗಿದೆ. ಘಟನೆ ಬಳಿಕ ಆರೋಗ್ಯ ಏರುಪೇರಾಗಿದ್ದರಿಂದ ತಡವಾಗಿ ದೂರು ನೀಡಲಾಗಿದೆ.

➤ ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.

ಭದ್ರಾವತಿ ತಾಲ್ಲೂಕಿನ ಕೂಡ್ಲಿಗೆರೆ ಸಮೀಪದ ರಂಗನಾಥಪುರದ ನಿವಾಸಿ ಮಾರಮ್ಮ (70) ಚಿನ್ನದ ಸರ ಕಳೆದುಕೊಂಡವರು. ಮಾರಮ್ಮ ಅವರು ಜೂನ್ 17ರಂದು ತಮ್ಮ ಮೊಮ್ಮಗನ ಜೊತೆಗೆ ಮೆಗ್ಗಾನ್ ಆಸ್ಪತ್ರೆಗೆ ಬಂದಿದ್ದರು. ಆಸ್ಪತ್ರೆ ಆವರಣದಲ್ಲಿರುವ ಹೋಟೆಲ್‌ನಲ್ಲಿ ತಿಂಡಿ ತಿಂದು ಬಿಲ್ ಪಾವತಿಸಲು ಬ್ಯಾಗ್‌ನಲ್ಲಿದ್ದ ಕೈ ಪರ್ಸ್ ತೆಗೆದು ನೋಡಿದಾಗ, ಅದರಲ್ಲಿದ್ದ 38 ಗ್ರಾಂ ತೂಕದ ಎರಡು ಎಳೆಯ ಬಂಗಾರದ ಮಾಂಗಲ್ಯ ಸರ ನಾಪತ್ತೆಯಾಗಿರುವುದು ಗಮನಕ್ಕೆ ಬಂದಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

Doddapete-Police-Station-Shimoga

ತಾವು ಬಸ್ಸಿನಲ್ಲಿ ಪ್ರಯಾಣಿಸುವಾಗ ಅಥವಾ ಹೋಟೆಲ್‌ನಲ್ಲಿ ಇದ್ದ ಸಂದರ್ಭ ಕಳ್ಳರು ಪರ್ಸ್‌ನಲ್ಲಿದ್ದ ಸರ ಕಳ್ಳತನ ಮಾಡಿದ್ದಾರೆ ಎಂದು ವೃದ್ಧೆ ದೂರಿನಲ್ಲಿ ಆರೋಪಿಸಿದ್ದಾರೆ. ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.

ಶಿವಮೊಗ್ಗ ಲೈವ್ ಅಪ್ಡೇಟ್ಸ್

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮ ವಾಟ್ಸಪ್ ಗ್ರೂಪ್ ಸೇರಿರಿ!