NEWS HIGHLIGHTS
ಶಿವಮೊಗ್ಗ: ಜೆರ್ಸಿ ತಳಿಯ ಕರುಗಳನ್ನು ಸಾಗಿಸುತ್ತಿದ್ದ ಗೂಡ್ಸ್ ವಾಹನವನ್ನು ತಡೆದ ಪೊಲೀಸರು ಚಾಲಕನ ವಿರುದ್ಧ ಪ್ರಕರಣ ದಾಖಲಿಸಿಕೊಂಡು, ಗೂಡ್ಸ್ ವಾಹನವನ್ನು ವಶಕ್ಕೆ ಪಡೆದಿದ್ದಾರೆ. ನಗರದ ಶಂಕರಮಠ ರಸ್ತೆಯಲ್ಲಿ ಘಟನೆ ನಡೆದಿದೆ.
ಶಂಕರಮಠ ರಸ್ತೆಯಲ್ಲಿ ಪೊಲೀಸರು ವಾಹನ ತಪಾಸಣೆ ನಡೆಸುತ್ತಿದ್ದಾಗ ಹೊನ್ನಾಳಿ ರಸ್ತೆ ಕಡೆಯಿಂದ ಬಂದ ಗೂಡ್ಸ್ ವಾಹನವನ್ನು ತಡೆದು ಪರಿಶೀಲಿಸಿದರು. ಅದರಲ್ಲಿ ಒಟ್ಟು 12 ಜೆರ್ಸಿ ತಳಿಯ ಹಸುಗೂಸುಗಳನ್ನು ಇಕ್ಕಟ್ಟಾದ ಜಾಗದಲ್ಲಿ ತುಂಬಿಕೊಂಡು ಸಾಗಿಸುತ್ತಿರುವುದು ಕಂಡುಬಂದಿತ್ತು. ಹಸುಗಳ ಸಾಗಣೆಗೆ ಯಾವುದೇ ದಾಖಲೆ ಇರಲಿಲ್ಲ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಪೊಲೀಸರು ವಾಹನವನ್ನು ವಶಕ್ಕೆ ಪಡೆದು, ಗೋವುಗಳನ್ನು ಮಹಾವೀರ ಗೋಶಾಲೆಗೆ ರವಾನಿಸಿದ್ದಾರೆ. ವಾಹನ ಮತ್ತು ಚಾಲಕನನ್ನು ವಶಕ್ಕೆ ಪಡೆದಿದ್ದಾರೆ. ಘಟನೆ ಸಂಬಂಧ ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.