ಶಿವಮೊಗ್ಗ ಲೈವ್.ಕಾಂ | SHIMOGA | 18 ನವೆಂಬರ್ 2019
‘ನಮ್ಮ ಮನೆಯಲ್ಲಿ ಪ್ರಾಣ ಬಿಡಬೇಕು ಅಂದುಕೊಂಡಿದ್ದೆ. ಆದರೆ ಜಿಲ್ಲಾಧಿಕಾರಿ ಕಚೇರಿ ಮುಂದೆಯೇ ಸಾಯುಲು ಸಿದ್ಧ..’
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಜಿಲ್ಲಾಧಿಕಾರಿ ಕಚೇರಿ ಮುಂದೆ ಕುಟುಂಬವೊಂದು ಅನಿರ್ದಿಷ್ಟಾವಧಿ ಮುಷ್ಕರ ನಡೆಸುತ್ತಿದೆ. ಡಿಸಿ ಆಫೀಸ್ ಮುಂದೆಯೇ ಪ್ರಾಣ ಬಿಡಲು ಸಿದ್ಧ ಎಂದು ಪಟ್ಟು ಹಿಡಿದು ಕುಳಿತಿದೆ.
ಪ್ರತಿಭಟನೆಗೆ ಕಾರಣವೇನು?
ಶರಾವತಿ ಮುಳುಗಡೆಯ ಕೆಲವು ಸಂತ್ರಸ್ಥರಿಗೆ ಭದ್ರಾವತಿ ತಾಲೂಕು ಕೆಂಚನಹಳ್ಳಿಯಲ್ಲಿ ಜಮೀನು ನೀಡಲಾಗಿತ್ತು. 1964ರಲ್ಲಿಯೇ ಮೂರು ಎಕರೆ ಜಮೀನಿಗೆ ಸಾಗುವಳಿ ಚೀಟಿ ನೀಡಲಾಗಿದೆ. ಆದರೆ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲು ಅರಣ್ಯ ಇಲಾಖೆ ಅವಕಾಶ ನೀಡುತ್ತಿಲ್ಲ. ಇದರ ವಿರುದ್ಧ ತಹಶೀಲ್ದಾರ್ ಸೇರಿದಂತೆ ವಿವಿಧ ಹಂತದ ಅಧಿಕಾರಿಗಳನ್ನು ಭೇಟಿ ಮಾಡಿ, ಕ್ರಮಕ್ಕೆ ಆಗ್ರಹಿಸಲಾಗಿದೆ. ಆದರು ಪ್ರಯೋಜನವಾಗಿಲ್ಲ.
ಅನಿರ್ದಿಷ್ಟಾವಧಿ ಮುಷ್ಕರ
ತಮ್ಮ ಬೇಡಿಕೆ ಈಡೇರುವವರೆಗೆ ಜಿಲ್ಲಾಧಿಕಾರಿ ಕಚೇರಿ ಮುಂದೆ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲು ಕುಟುಂಬ ನಿರ್ಧರಿಸಿದೆ. ಹೊಸನಗರ ತಾಲೂಕಿನ ಕೊಡಸೆ ಗ್ರಾಮದಲ್ಲಿ ಈ ಕುಟುಂಬದ ಜಮೀನು, ಶರಾವತಿ ಹಿನ್ನೀರಿನಲ್ಲಿ ಮುಳುಗಡೆಯಾಗಿದೆ.
ಪ್ರತಿಭಟನೆಯಲ್ಲಿ ಮಹದೇವಪ್ಪ, ಲಲಿತಮ್ಮ, ಮಹೇಶ್ ಪಾಲ್ಗೊಂಡಿದ್ದಾರೆ.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200
ಸುದ್ದಿಗಾಗಿ ಕರೆ ಮಾಡಿ – 9964634494
ಈ ಮೇಲ್ ಐಡಿ | [email protected]