15 ದಿನದ ಬಳಿಕ ವೃದ್ಧನ ಮೃತದೇಹ ಪತ್ತೆ, ಆಗಿದ್ದೇನು?

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

NEWS HIGHLIGHTS

ತೀರ್ಥಹಳ್ಳಿ: ಮಳೆಯ ಅಬ್ಬರಕ್ಕೆ ಸಿಲುಕಿ ಮಾಲತಿ ನದಿಯಲ್ಲಿ ತೇಲಿ ಹೋಗಿ ನಾಪತ್ತೆಯಾಗಿದ್ದ ವೃದ್ಧರೊಬ್ಬರ ಮೃತದೇಹ ಹದಿನೈದು ದಿನದ ಬಳಿಕ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.

➤ ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.

ತಾಲ್ಲೂಕಿನ ಕೇಳೂರು ಗ್ರಾಮದ ರಾಮಪ್ಪ (62) ಮೃತರು. 15 ದಿನಗಳ ಹಿಂದೆ ತಮ್ಮ ತೋಟಕ್ಕೆ ನೀರಿನ ಮೋಟಾರ್ ಆಫ್ ಮಾಡಲು ಹೋದ ಸಂದರ್ಭ ನಾಪತ್ತೆಯಾಗಿದ್ದರು. ತೋಟದ ಸಮೀಪ ಹರಿಯುವ ಮಾಲತಿ ನದಿಯ ದಂಡೆಯ ಮೇಲೆ ರಾಮಪ್ಪ ಅವರ ಚಪ್ಪಲಿ ಹಾಗೂ ಬಟ್ಟೆ ಪತ್ತೆಯಾಗಿತ್ತು. ಅವರು ನದಿಯಲ್ಲಿ ತೇಲಿ ಹೋಗಿರುವ ಶಂಕೆ ವ್ಯಕ್ತಪಡಿಸಿ ಕುಟುಂಬದವರು ಪೊಲೀಸರಿಗೆ ದೂರು ನೀಡಿದ್ದರು.

AGUMBE-NEWS-GRAPHICS-BY-SHIVAMOGGA-LIVE

ತುಂಗಾ ನದಿಯ ಉಪನದಿಯಾಗಿರುವ ಮಾಲತಿ ನದಿಯಲ್ಲಿ ಪ್ರವಾಹ ಪರಿಸ್ಥಿತಿ ಇದ್ದ ಕಾರಣ, ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಪೊಲೀಸರು ಶೋಧ ಕಾರ್ಯ ನಡೆಸಿದ್ದರೂ ಮೃತದೇಹ ಪತ್ತೆಯಾಗಿರಲಿಲ್ಲ. ಇಂದು ವೃದ್ಧನ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಈ ಘಟನೆಗೆ ಸಂಬಂಧಿಸಿದಂತೆ ಆಗುಂಬೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಶಿವಮೊಗ್ಗ ಲೈವ್ ಅಪ್ಡೇಟ್ಸ್

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮ ವಾಟ್ಸಪ್ ಗ್ರೂಪ್ ಸೇರಿರಿ!