NEWS HIGHLIGHTS
ಶಿವಮೊಗ್ಗ: ನಗರದಲ್ಲಿ ಅರ್ಹತಾ ಪತ್ರ (ಎಫ್‌ಸಿ) ನವೀಕರಿಸದೆ ನಿಯಮಬಾಹಿರವಾಗಿ ಸಂಚರಿಸುತ್ತಿರುವ ಆಟೋ ರಿಕ್ಷಾಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಾದೇಶಿಕ ಸಾರಿಗೆ ಅಧಿಕಾರಿ ಮುರುಗೇಂದ್ರ ಶಿರೋಳ್ಳರ್ ಎಚ್ಚರಿಕೆ ನೀಡಿದ್ದಾರೆ.
ಅರ್ಹತಾ ಪತ್ರದ ಅವಧಿ ಮುಕ್ತಾಯವಾಗಿರುವ ಆಟೋಗಳ ಚಾಲಕರು ಅಥವಾ ಮಾಲೀಕರು ತಕ್ಷಣವೇ ಸಂಬಂಧಪಟ್ಟ ಸಾರಿಗೆ ಕಚೇರಿಯಲ್ಲಿ ನಿಗದಿತ ಶುಲ್ಕ ಪಾವತಿಸಬೇಕು. ತದನಂತರ ತಮ್ಮ ವಾಹನಗಳನ್ನು ಮಲವಗೊಪ್ಪದ ಡ್ರೈವಿಂಗ್ ಟ್ರ್ಯಾಕ್‌ನಲ್ಲಿ ಹಾಜರುಪಡಿಸಿ ಅರ್ಹತಾ ಪತ್ರ ನವೀಕರಿಸಿಕೊಳ್ಳಲು ಸೂಚಿಸಲಾಗಿದೆ. ತಪ್ಪಿದಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಇದನ್ನೂ ಓದಿ:➤ ಶಿವಮೊಗ್ಗದಲ್ಲಿಯು ಚೆನ್ನಮ್ಮ ಸ್ಮರಣೆ, ಶ್ರದ್ಧಾಂಜಲಿ, ಪ್ರಮುಖರಿಂದ ಸಂತಾಪ, ಯಾರೆಲ್ಲ ಏನೆಲ್ಲ ಹೇಳಿದರು?