ಸವಳಂಗ ರಸ್ತೆಯಲ್ಲಿ ಟೈರ್‌ ಸ್ಪೋಟ, ಎದುರಿನಿಂದ ಬರುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

NEWS HIGHLIGHTS

ಶಿವಮೊಗ್ಗ: ಚಲಿಸುತ್ತಿದ್ದ ಕಾರಿನ ಮುಂಭಾಗದ ಚಕ್ರ ಸ್ಫೋಟಗೊಂಡು ನಿಯಂತ್ರಣ ತಪ್ಪಿ ಎದುರಿನಿಂದ ಬರುತ್ತಿದ್ದ ಸ್ಕೂಟಿಗೆ ಡಿಕ್ಕಿ ಹೊಡೆದ ಪರಿಣಾಮ ದಂಪತಿ ಗಾಯಗೊಂಡಿದ್ದಾರೆ. ಸವಳಂಗ ರಸ್ತೆಯ ಜ್ಞಾನಸಾಗರ ಶಾಲೆಯ ಬಳಿ ಘಟನೆ ಸಂಭವಿಸಿದೆ.

➤ ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.

ನಗರದ ಮಂಜುನಾಥ ಬಡಾವಣೆಯ ನಿವಾಸಿಗಳಾದ ಫಾರೂಕ್ ಖಾನ್ (32) ಹಾಗೂ ಅವರ ಹೆಂಡತಿ ಬಿಬಿ ಆಸಿಯಾ (26) ಗಾಯಗೊಂಡವರು. ಇಬ್ಬರೂ ಶಿವಮೊಗ್ಗದಿಂದ ಶಿಕಾರಿಪುರಕ್ಕೆ ದ್ವಿಚಕ್ರ ವಾಹನದಲ್ಲಿ ಹೊರಟಿದ್ದರು. ಮಧ್ಯಾಹ್ನ 2 ಗಂಟೆ ವೇಳೆಗೆ ಜ್ಞಾನಸಾಗರ ಶಾಲೆಯ ಬಳಿ ತಲುಪಿದಾಗ, ಸವಳಂಗ ಕಡೆಯಿಂದ ಅತಿವೇಗವಾಗಿ ಬಂದ ನೆಕ್ಸನ್ ಕಾರಿನ ಮುಂಭಾಗದ ಬಲಚಕ್ರ ಸ್ಫೋಟಗೊಂಡಿದೆ ಎಂದು ಆರೋಪಿಸಲಾಗಿದೆ.

ACCIDENT-NEWS-GENERAL-IMAGE.

ಚಾಲಕನ ನಿಯಂತ್ರಣ ತಪ್ಪಿದ ಕಾರು ನೇರವಾಗಿ ದಂಪತಿ ಸಂಚರಿಸುತ್ತಿದ್ದ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಫಾರೂಕ್ ಖಾನ್ ಅವರ ಬಲಗೈ ಹಾಗೂ ಕಾಲಿಗೆ ಪೆಟ್ಟಾಗಿದೆ. ಬಿಬಿ ಆಸಿಯಾ ಅವರ ಬಲಗಾಲಿನ ಮಂಡಿಗೆ ಗಾಯವಾಗಿದೆ. ಸ್ಥಳೀಯರು ತಕ್ಷಣವೇ ಗಾಯಾಳುಗಳನ್ನು ನಗರದ ಸರ್ಜಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.