NEWS HIGHLIGHTS
ಭದ್ರಾವತಿ: ತಾಲ್ಲೂಕಿನ ನಾಗತಿಬೆಳಗಲು ಗ್ರಾಮದ ತಾಂಡಾ ರಸ್ತೆಯಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಭದ್ರಾವತಿ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಮಣಿಕಂಠ (19) ಹಾಗೂ ಜೀವನ್ (19) ಬಂಧಿತ ಆರೋಪಿಗಳು. ಇವರಿಂದ ₹65,500 ಮೌಲ್ಯದ 1 ಕೆ.ಜಿ 310 ಗ್ರಾಂ ಗಾಂಜಾವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ ಎಂದು ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ನಾಗತಿಬೆಳಗಲು ತಾಂಡಾ ಕಡೆಯಿಂದ ಭದ್ರಾವತಿ ಕಡೆಗೆ ದ್ವಿಚಕ್ರ ವಾಹನದಲ್ಲಿ ಗಾಂಜಾವನ್ನು ಮಾರಾಟ ಮಾಡಲು ಸಾಗಿಸುತ್ತಿರುವ ಬಗ್ಗೆ ಪೊಲೀಸರಿಗೆ ಖಚಿತ ಮಾಹಿತಿ ಲಭಿಸಿತ್ತು. ಈ ಹಿನ್ನೆಲೆ ಭದ್ರಾವತಿ ಗ್ರಾಮಾಂತರ ಪೊಲೀಸರು ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ. ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.