ಶಿವಮೊಗ್ಗ: 7 ದಿನದ ಗಡುವು, ತಪ್ಪಿದಲ್ಲಿ ನೀರು ಸಂಪರ್ಕ ಕಡಿತದ ಎಚ್ಚರಿಕೆ

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

NEWS HIGHLIGHTS

ಶಿವಮೊಗ್ಗ: ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ನೀರಿನ ಕಂದಾಯ ಬಾಕಿ ಉಳಿಸಿಕೊಂಡಿರುವ ಬಳಕೆದಾರರು ಹಾಗೂ ಮಾಲೀಕರು 7 ದಿನಗಳ ಒಳಗಾಗಿ ಕಡ್ಡಾಯವಾಗಿ ಪಾವತಿಸಬೇಕು. ತಪ್ಪಿದ್ದಲ್ಲಿ ಯಾವುದೇ ಮುನ್ಸೂಚನೆ ನೀಡದೆ ನೀರಿನ ಸಂಪರ್ಕವನ್ನು ಕಡಿತಗೊಳಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

➤ ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ.

ಬಾಕಿ ಮೊತ್ತವನ್ನು ನಿಗದಿತ ಅವಧಿಯಲ್ಲಿ ಪಾವತಿಸದ ಗ್ರಾಹಕರ ಸಂಪರ್ಕ ಕಡಿತಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಮಹಾನಗರ ಪಾಲಿಕೆ ಹಾಗೂ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಪ್ರಕಟಣೆಯಲ್ಲಿ ಎಚ್ಚರಿಸಿದ್ದಾರೆ.

Drinking-Water-Tap