ಎಸ್.ಪಿ.ದಿನೇಶ್ ಕಾಂಗ್ರೆಸ್‌ಗೆ ಮರುಸರ್ಪಡೆ, ಏನಂದ್ರು ಜಿಲ್ಲಾಧ್ಯಕ್ಷರು?

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ
NEWS HIGHLIGHTS

ಶಿವಮೊಗ್ಗ: ನೈರುತ್ಯ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿ ಕಾಂಗ್ರೆಸ್ ಪಕ್ಷದಿಂದ ಉಚ್ಚಾಟನೆಗೊಂಡಿದ್ದ ಎಸ್.ಪಿ.ದಿನೇಶ್ ಅವರನ್ನು ಕೆಪಿಸಿಸಿ ಅಧ್ಯಕ್ಷರ ಆದೇಶದ ಮೇರೆಗೆ ಪಕ್ಷಕ್ಕೆ ಮರುಸೇರ್ಪಡೆಗೊಳಿಸಲಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್.ಪ್ರಸನ್ನಕುಮಾರ್ ತಿಳಿಸಿದರು.

➤ ಸುದ್ದಿಯ ಮುಂದಿನ 4 ಪ್ಯಾರಾಗಳು ಕೆಳಗಿವೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎಸ್.ಪಿ.ದಿನೇಶ್ ಅವರು ಹಿಂದೆ ಬಂಡಾಯವಾಗಿ ಸ್ಪರ್ಧಿಸಿದ್ದರಿಂದ ಪಕ್ಷದಿಂದ 6 ವರ್ಷಗಳ ಕಾಲ ಉಚ್ಛಾಟಿಸಲಾಗಿತ್ತು. ಆದರೆ ಈಗ ಬದಲಾದ ರಾಜಕೀಯ ಬೆಳವಣಿಗೆ ಹಾಗೂ ಮುಖಂಡರ ನಿರ್ದೇಶನದ ಮೇರೆಗೆ ಅವರನ್ನು ಪುನಃ ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳಲಾಗಿದೆ ಎಂದರು.

SP-Dinesh-Rejoins-Congress-Party-in-shimoga

ಪಕ್ಷದ ರಾಜ್ಯ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್, ಡಿ.ಕೆ.ಶಿವಕುಮಾರ್ ಹಾಗೂ ಮಂಜುನಾಥ್ ಭಂಡಾರಿ ಅವರ ನಿರ್ದೇಶನದಂತೆ ಯಾವುದೇ ಷರತ್ತುಗಳಿಲ್ಲದೆ ಅವರನ್ನು ಪಕ್ಷದ ಕಚೇರಿಯಲ್ಲಿ ಸ್ವಾಗತಿಸಿ ಮರುಸೇರ್ಪಡೆಗೊಳಿಸಲಾಗಿದೆ ಎಂದು ಸ್ಪಷ್ಟಪಡಿಸಿದರು.

ಪಕ್ಷಕ್ಕೆ ಮರುಸೇರ್ಪಡೆಗೊಂಡ ಬಳಿಕ ಮಾತನಾಡಿದ ಎಸ್.ಪಿ.ದಿನೇಶ್, ‘ಕಳೆದ 30 ವರ್ಷಗಳಿಂದ ವಿದ್ಯಾರ್ಥಿ ಸಂಘಟನೆಯಿಂದಲೂ ಪಕ್ಷಕ್ಕಾಗಿ ದುಡಿದಿದ್ದೇನೆ. ಕೆಲವು ಅನಿವಾರ್ಯ ಕಾರಣಗಳಿಂದ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಬೇಕಾಯಿತು. ಈಗ ಹೈಕಮಾಂಡ್ ನಿರ್ಧಾರದ ಮೇರೆಗೆ ಪಕ್ಷಕ್ಕೆ ಮರಳಿದ್ದು, ಹಿಂದೆಯೂ ಪಕ್ಷಕ್ಕಾಗಿ ಶ್ರಮಿಸಿದ್ದೇನೆ, ಮುಂದೆಯೂ ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇನೆ’ ಎಂದರು.

ಸುದ್ದಿಗೋಷ್ಠಿಯಲ್ಲಿ ನಿಗಮ ಮಂಡಳಿಯ ಅಧ್ಯಕ್ಷರಾದ ಚೇತನ್ ಕೆ.ಗೌಡ, ಜಿ.ಪಲ್ಲವಿ, ಪ್ರಮುಖರಾದ ಕಲಗೋಡು ರತ್ನಾಕರ್, ಕಲೀಂ ಪಾಷ, ಶಿವಣ್ಣ, ಎಸ್.ಟಿ.ಹಾಲಪ್ಪ, ಮಧುಸೂಧನ್, ವಿಜಯಲಕ್ಷ್ಮೀ ಪಾಟೀಲ್, ಸುವರ್ಣ ನಾಗರಾಜ, ಭಾರತಿ ರಾಮಕೃಷ್ಣ, ಯು.ಶಿವಾನಂದ, ಸಯ್ಯದ್ ಅಡ್ಡು ಸೇರಿದಂತೆ ಇತರರು ಉಪಸ್ಥಿತರಿದ್ದರು.