NEWS HIGHLIGHTS
ತೀರ್ಥಹಳ್ಳಿ: ತಾಲ್ಲೂಕಿನ ಅರಳಸುರುಳಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಹುಲಿಸರದ ಶ್ರೀ ವನದುರ್ಗಾ ಪರಮೇಶ್ವರಿ ದೇವಸ್ಥಾನದಲ್ಲಿ ಕಳ್ಳತನ ನಡೆದಿದೆ.
ದೇವಸ್ಥಾನದ ಗರ್ಭಗುಡಿಯ ಬೀಗ ಒಡೆದು ಒಳನುಗ್ಗಿದ ಕಳ್ಳರು, ಶ್ರೀ ವನದುರ್ಗಾಪರಮೇಶ್ವರಿ ದೇವಿಯ ಬೆಳ್ಳಿಯ ಮುಖವಾಡ, ಮಾಂಗಲ್ಯ ಸರ ಸೇರಿ ಸುಮಾರು 2 ಕೆ.ಜಿಗೂ ಅಧಿಕ ತೂಕದ ಬೆಳ್ಳಿಯ ಪೂಜಾ ವಸ್ತುಗಳನ್ನು ದೋಚಿದ್ದಾರೆ. ಕಾಣಿಕೆ ಹುಂಡಿಯನ್ನು ಒಡೆದು ಹಣವನ್ನೂ ಸಹ ಕಳ್ಳತನ ಮಾಡಲಾಗಿದೆ ಎಂದು ಆರೋಪಿಸಲಾಗಿದೆ.

ಮಂಗಳವಾರ ಮತ್ತು ಶುಕ್ರವಾರ ಮಾತ್ರ ಈ ದೇವಸ್ಥಾನದಲ್ಲಿ ಪೂಜೆ ನಡೆಯುತ್ತದೆ. ಇದನ್ನು ಗಮನಿಸಿದ್ದ ಕಳ್ಳರು ಈ ಕೃತ್ಯ ಎಸಗಿರಬಹುದು ಎಂದು ಶಂಕಿಸಲಾಗಿದೆ. ಪ್ರತಿದಿನದಂತೆ ಬೆಳಿಗ್ಗೆ ಭಕ್ತರೊಬ್ಬರು ದೇವಸ್ಥಾನಕ್ಕೆ ದೇವರ ದರ್ಶನಕ್ಕೆ ಬಂದಾಗ ಈ ಕಳ್ಳತನ ಪ್ರಕರಣ ಬೆಳಕಿಗೆ ಬಂದಿದೆ.
ತೀರ್ಥಹಳ್ಳಿ ಪೊಲೀಸ್ ಇನ್ಸ್‌ಪೆಕ್ಟರ್ ಇಮ್ರಾನ್ ಬೇಗ್, ಅಪರಾಧ ಪತ್ತೆ ವಿಭಾಗದ ಸಬ್ ಇನ್ಸ್‌ಪೆಕ್ಟರ್ ಸುಷ್ಮಾ ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಇದನ್ನೂ ಓದಿ:➤ ಆಯತಪ್ಪಿ ಕೆರೆಗೆ ಬಿದ್ದು ರೈತ ಸಾವು, ಆಗಿದ್ದೇನು?