NEWS HIGHLIGHTS
ತೀರ್ಥಹಳ್ಳಿ: ಕೋಣಂದೂರಿನ ವಸತಿ ಶಾಲೆಯ ಹಾಸ್ಟೆಲ್ನಲ್ಲಿದ್ದ ಸುಮಾರು 25 ವಿದ್ಯಾರ್ಥಿಗಳಲ್ಲಿ ಶುಕ್ರವಾರ ವಾಂತಿ-ಭೇದಿ ಕಾಣಿಸಿಕೊಂಡಿದ್ದು, ಅವರಲ್ಲಿ 9 ವಿದ್ಯಾರ್ಥಿಗಳನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಇಬ್ಬರು ಬಾಲಕರನ್ನು ಹೊರತುಪಡಿಸಿ ಉಳಿದವರನ್ನು ಶನಿವಾರ ಡಿಸ್ಚಾರ್ಜ್ ಮಾಡಲಾಗಿದೆ.
6ನೇ ತರಗತಿಯಿಂದ 9ನೇ ತರಗತಿವರೆಗಿನ ವಿದ್ಯಾರ್ಥಿಗಳ ಆರೋಗ್ಯ ಹದಗೆಟ್ಟಿದ್ದು, ಶುಕ್ರವಾರ ಪ್ರಾಥಮಿಕ ಚಿಕಿತ್ಸೆ ಬಳಿಕ ತೀರ್ಥಹಳ್ಳಿಯ ಜೆಸಿ ಆಸ್ಪತ್ರೆಗೆ ಕಳುಹಿಸಲಾಗಿತ್ತು. ಅಲ್ಲಿಂದ 9 ವಿದ್ಯಾರ್ಥಿಗಳನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿರುವ ಇಬ್ಬರ ಆರೋಗ್ಯವೂ ಸ್ಥಿರವಾಗಿದೆ.

ಜಿಲ್ಲಾ ಆರೋಗ್ಯಾಧಿಕಾರಿ ಡಾ. ನಟರಾಜ್ ಶನಿವಾರ ಕೋಣಂದೂರಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರೂ, ಅಸ್ವಸ್ಥತೆಗೆ ನಿಖರ ಕಾರಣ ತಿಳಿದುಬಂದಿಲ್ಲ. ವಿಶೇಷವೆಂದರೆ ವಸತಿ ನಿಲಯದಲ್ಲಿ ವಿದ್ಯಾರ್ಥಿನಿಯರು ಇದ್ದರೂ ಬಾಲಕರು ಮಾತ್ರ ಅಸ್ವಸ್ಥಗೊಂಡಿದ್ದಾರೆ.