NEWS HIGHLIGHTS
ಶಿವಮೊಗ್ಗ: ತಾಲೂಕಿನ ಆಯನೂರು ಸಮೀಪದ ವೀರಗಾರನ ಬೈರನಕೊಪ್ಪ ಬಳಿ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ನಗರದ ಗಾಡಿಕೊಪ್ಪ ನಿವಾಸಿ, ಖಾಸಗಿ ಬಸ್ ಚಾಲಕ ವೀರೇಶ್ (28) ಮೃತ ವ್ಯಕ್ತಿ. ಬೆಂಗಳೂರು – ಹೊನ್ನಾವರ ರಾಷ್ಟ್ರೀಯ ಹೆದ್ದಾರಿ-206ರಲ್ಲಿ ಬೆಳಗಿನ ಜಾವ ಘಟನೆ ಸಂಭವಿಸಿದೆ. ಬೈಕ್‌ನಲ್ಲಿ ವೀರೇಶ್ ತೆರಳುತ್ತಿದ್ದ ವೇಳೆ ವಾಹನ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ವೀರೇಶ್ ತಲೆಗೆ ಪೆಟ್ಟಾಗಿ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಮೃತದೇಹವನ್ನು ಮೆಗ್ಗಾನ್ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ. ಕುಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:➤ ರೈತನ ಮನೆ ಮುಂಭಾಗ ಇದ್ದ ರೋಟೋವೇಟರ್ ನಾಪತ್ತೆ