ಸರ್ಕಾರಿ ಗೌರವದೊಂದಿಗೆ ಹೆಚ್‌.ಎಂ.ಚಂದ್ರಶೇಖರಪ್ಪ ಅಂತ್ಯಕ್ರಿಯೆ, ಯಾರೆಲ್ಲ ಅಂತಿಮ ದರ್ಶನ ಪಡೆದರು?

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ
NEWS HIGHLIGHTS

ಶಿವಮೊಗ್ಗ: ಅನಾರೋಗ್ಯದ ಹಿನ್ನೆಲೆ ಭಾನುವಾರ ನಿಧನರಾದ ಮಾಜಿ ಶಾಸಕ ಹೆಚ್.ಎಂ.ಚಂದ್ರಶೇಖರಪ್ಪ ಅವರ ಅಂತ್ಯಕ್ರಿಯೆಯು ಸೋಮವಾರ ಸಂಜೆ ಗಾಜನೂರು-ಹೊಸಹಳ್ಳಿ ಬಳಿಯ ಅವರ ತೋಟದಲ್ಲಿ ಸರ್ಕಾರಿ ಗೌರವದೊಂದಿಗೆ ನೆರವೇರಿತು.

➤ ಸುದ್ದಿಯ ಮುಂದಿನ 4 ಪ್ಯಾರಾಗಳು ಕೆಳಗಿವೆ.

ಅದಕ್ಕೂ ಮುನ್ನ ಪಾರ್ಥಿವ ಶರೀರವನ್ನು ಶಿವಮೊಗ್ಗದ ಬಸವನಗುಡಿಯಲ್ಲಿರುವ ಅವರ ನಿವಾಸದಲ್ಲಿ ಸಾರ್ವಜನಿಕರ ದರ್ಶನಕ್ಕೆ ಇಡಲಾಗಿತ್ತು. ಈ ವೇಳೆ ಒಡನಾಡಿಗಳು, ಬೆಂಬಲಿಗರು ಹಾಗೂ ಸಾರ್ವಜನಿಕರು ಅಂತಿಮ ದರ್ಶನ ಪಡೆದರು.

Former-MLA-HM-Chandrashekarappa-Last-Rites.

ಸಾಣೇಹಳ್ಳಿ ಮಠದ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ, ಬಸವ ಕೇಂದ್ರದ ಬಸವ ಮರುಳಸಿದ್ದ ಸ್ವಾಮೀಜಿ, ಹೊನ್ನಾಳಿ ಹಿರೇಕಲ್ಮಠದ ಒಡೆಯರ್ ಚನ್ನಮಲ್ಲಿಕಾರ್ಜುನ ಸ್ವಾಮೀಜಿ, ಶಿಕಾರಿಪುರ ವಿರಕ್ತಮಠದ ಚನ್ನಬಸವ ಸ್ವಾಮೀಜಿ ಹಾಗೂ ಸೇಕ್ರೆಡ್ ಹಾರ್ಟ್‌ ಚರ್ಚ್‌ನ ಧರ್ಮಗುರು ಫಾದ‌ರ್ ಸ್ಪ್ಯಾನಿ ಡಿಸೋಜಾ ಅಂತಿಮ ದರ್ಶನ ಪಡೆದು ಕುಟುಂಬದವರಿಗೆ ಸಾಂತ್ವನ ಹೇಳಿದರು.

ಮಾಜಿ ಸಚಿವರಾದ ಮಧು ಬಂಗಾರಪ್ಪ, ಕಿಮ್ಮನೆ ರತ್ನಾಕರ, ಕೆ.ಎಸ್.ಈಶ್ವರಪ್ಪ, ಶಾಸಕರಾದ ಎಸ್.ಎನ್.ಚನ್ನಬಸಪ್ಪ, ಡಿ.ಜಿ.ಶಾಂತನಗೌಡ, ಶಾರದಾ ಪೂರ್ಯಾನಾಯ್ಕ, ಡಾ.ಧನಂಜಯ ಸರ್ಜಿ, ಬಲ್ಕಿಸ್‌ ಬಾನು, ಸರ್ಕಾರಿ ನೌಕರರ ಸಂಘದ ರಾಜ್ಯ ಅಧ್ಯಕ್ಷ ಸಿ.ಎಸ್.ಷಡಾಕ್ಷರಿ, ಮಾಜಿ ಶಾಸಕರಾದ ಆಯನೂರು ಮಂಜುನಾಥ್, ಕೆ.ಬಿ.ಪ್ರಸನ್ನಕುಮಾರ್, ಎಸ್.ರುದ್ರೇಗೌಡ, ಅಶೋಕ ನಾಯ್ಕ, ವಡ್ನಾಳ್ ರಾಜಣ್ಣ, ಆರ್.ಪ್ರಸನ್ನಕುಮಾರ್, ಡಿವಿಎಸ್ ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷ ಎಸ್.ಪಿ.ದಿನೇಶ್, ಬಸವೇಶ್ವರ ವೀರಶೈವ ಸಮಾಜದ ಅಧ್ಯಕ್ಷ ಎಸ್.ಎನ್‌.ಜ್ಯೋತಿಪ್ರಕಾಶ್, ಬಿ.ಕೆ.ಮೋಹನ್ ಸೇರಿದಂತೆ ಹಲವು ಗಣ್ಯರು ಅಂತಿಮ ನಮನ ಸಲ್ಲಿಸಿದರು.

ಹೆಚ್‌.ಎಂ.ಚಂದ್ರಶೇಖರಪ್ಪ ಅವರ ಪುತ್ರರಾದ ಕಾಂಗ್ರೆಸ್ ಮುಖಂಡ ಎಚ್.ಸಿ.ಯೋಗೀಶ್ ಹಾಗೂ ಉದ್ಯಮಿ ಎಚ್.ಸಿ.ಶರಣ್ ನೇತೃತ್ವದಲ್ಲಿ ಅಂತ್ಯಕ್ರಿಯೆಯ ವಿಧಿ-ವಿಧಾನಗಳು ಜರುಗಿದವು.