NEWS HIGHLIGHTS
ಶಿವಮೊಗ್ಗ: ಅಪ್ರಾಪ್ತ ಬಾಲಕನಿಗೆ ಬೈಕ್ ಚಾಲನೆ ಮಾಡಲು ನೀಡಿದ್ದ ಮಾಲೀಕನಿಗೆ ಇಲ್ಲಿನ ನ್ಯಾಯಾಲಯ ₹25,000 ದಂಡ ವಿಧಿಸಿ ಆದೇಶಿಸಿದೆ.
ನಗರದ ಸೋಮಿನಕೊಪ್ಪ ರಸ್ತೆಯಲ್ಲಿ ವಿನೋಬನಗರ ಠಾಣೆ ಪೊಲೀಸರು ತಪಾಸಣೆ ನಡೆಸುತ್ತಿದ್ದ ವೇಳೆ, ಬಾಲಕನೊಬ್ಬ ಕೆಟಿಎಂ ಡ್ಯೂಕ್ ಬೈಕ್ ಅನ್ನು ವಿರುದ್ಧ ದಿಕ್ಕಿನಲ್ಲಿ ವೇಗವಾಗಿ ಚಾಲನೆ ಮಾಡಿಕೊಂಡು ಬಂದಿದ್ದಾನೆ. ತಕ್ಷಣ ಪೊಲೀಸರು ತಡೆದು ವಿಚಾರಣೆ ನಡೆಸಿದಾಗ ಆತ ಅಪ್ರಾಪ್ತ ಎಂದು ತಿಳಿದುಬಂದಿದೆ.

ಈ ಹಿನ್ನೆಲೆಯಲ್ಲಿ ವಾಹನದ ಮಾಲೀಕನ ವಿರುದ್ಧ ಮೋಟಾರು ವಾಹನ ಕಾಯ್ದೆಯಡಿ ದೋಷಾರೋಪಣಾ ಪತ್ರ ಸಲ್ಲಿಸಲಾಗಿತ್ತು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ ಮಾಲೀಕನಿಗೆ ದಂಡ ವಿಧಿಸಿದೆ.