ಶಿವಮೊಗ್ಗ, ಭದ್ರಾವತಿಯಲ್ಲಿ ಬರ ಪರಿಸ್ಥಿತಿ ಅಧ್ಯಯನ, ಬಿಜೆಪಿ ಟೀಮ್‌ ರೆಡಿ, ಯಾರೆಲ್ಲ ಇದ್ದಾರೆ?

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ
NEWS HIGHLIGHTS

ಶಿವಮೊಗ್ಗ: ತೀವ್ರ ಬರ ಪರಿಸ್ಥಿತಿ, ಕುಡಿಯುವ ನೀರಿನ ಅಭಾವ ಹಾಗೂ ರೈತರ ಬೆಳೆ ಹಾನಿ ಪರಿಸ್ಥಿತಿಯನ್ನು ನೇರವಾಗಿ ವೀಕ್ಷಿಸಿ ಅಧ್ಯಯನ ನಡೆಸಲು ಬಿಜೆಪಿ ನಿಯೋಗವು ಶಿವಮೊಗ್ಗ ಮತ್ತು ಭದ್ರಾವತಿ ತಾಲ್ಲೂಕುಗಳ ವಿವಿಧ ಬರ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

➤ ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.

ಈ ಪ್ರವಾಸದ ವೇಳೆ ತಂಡವು ಬರದಿಂದ ಸಂಕಷ್ಟಕ್ಕೊಳಗಾದ ರೈತರ ಜಮೀನುಗಳಿಗೆ ಭೇಟಿ ನೀಡಿ ಬೆಳೆ ಹಾನಿ ಪರಿಶೀಲಿಸಲಿದೆ. ರೈತರ ಕುಂದುಕೊರತೆಗಳನ್ನು ಆಲಿಸಲಿದೆ. ನಂತರ ಸಮಗ್ರ ವರದಿಯನ್ನು ಸಿದ್ಧಪಡಿಸಿ ಸರ್ಕಾರದಿಂದ ಸೂಕ್ತ ಬರ ಪರಿಹಾರ ದೊರಕಿಸಿಕೊಡಲು ಒತ್ತಾಯಿಸಲಾಗುವುದು ಎಂದು ತಿಳಿಸಲಾಗಿದೆ.

BJP-Office-Shimoga

ಅಧ್ಯಯನ ತಂಡದ ಸಂಯೋಜಕರಾಗಿ ವಿಧಾನ ಪರಿಷತ್ ಸದಸ್ಯ ಡಿ.ಎಸ್. ಅರುಣ್ ಕಾರ್ಯನಿರ್ವಹಿಸಲಿದ್ದಾರೆ. ಶಾಸಕರಾದ ಆರಗ ಜ್ಞಾನೇಂದ್ರ, ವಿ. ಸುನಿಲ್ ಕುಮಾರ್, ಶಿವಮೊಗ್ಗ ನಗರ ಶಾಸಕ ಎಸ್.ಎನ್. ಚನ್ನಬಸಪ್ಪ ಹಾಗೂ ವಿಧಾನ ಪರಿಷತ್ ಸದಸ್ಯ ಡಾ. ಧನಂಜಯ್ ಸರ್ಜಿ ಸೇರಿ ಪ್ರಮುಖರು ಈ ಪ್ರವಾಸದಲ್ಲಿ ಭಾಗವಹಿಸಲಿದ್ದಾರೆ.