ಶಿವಮೊಗ್ಗದಲ್ಲಿ 27 ವರ್ಷದ ಯುವಕನಿಗೆ 10 ವರ್ಷ ಜೈಲು ಶಿಕ್ಷೆ, ₹20,000 ದಂಡ, ಕಾರಣವೇನು?

ಶಿವಮೊಗ್ಗ: ಮನೆಯಲ್ಲಿದ್ದ ಮಹಿಳೆಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ, ಜಾತಿ ನಿಂದನೆ ಮಾಡಿದ್ದ ವ್ಯಕ್ತಿಗೆ 10 ವರ್ಷ ಕಠಿಣ ಕಾರಗೃಹ ಶಿಕ್ಷೆ ವಿಧಿಸಿ ನ್ಯಾಯಾಲಯ ತೀರ್ಪು ನೀಡಿದೆ.➤ ಸುದ್ದಿಯ ಮುಂದಿನ 3 ಪ್ಯಾರಾಗಳು ಕೆಳಗಿವೆ.

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಘಟನೆಯ ಹಿನ್ನೆಲೆ

2023ರ ನವೆಂಬರ್ 2ರಂದು ಈ ಘಟನೆ ನಡೆದಿತ್ತು. ವಿನೋಬ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಮನೆಯಲ್ಲಿ ಮಹಿಳೆ ಒಬ್ಬರೇ ಇದ್ದರು. ಈ ವೇಳೆ ಅಲ್ಲಿಗೆ ಬಂದ 27 ವರ್ಷದ ಯುವಕ ಏಕಾಏಕಿ ಮನೆಗೆ ನುಗ್ಗಿದ್ದನು. ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ, ಜಾತಿ ನಿಂದನೆ ಮಾಡಿ ಜೀವಬೆದರಿಕೆ ಹಾಕಿದ್ದನು ಎಂದು ಆರೋಪಿಸಲಾಗಿತ್ತು.

Shivamogga-Court-Building

ಈ ಸಂಬಂಧ ವಿನೋಬ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಶಿವಮೊಗ್ಗ ಉಪವಿಭಾಗ-ಬಿ ಡಿವೈಎಸ್‌ಪಿ ಸುರೇಶ್ ಎಂ. ಅವರು ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣ ಪತ್ರ ಸಲ್ಲಿಸಿದ್ದರು. ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ವಿಚಾರಣೆ ನಡೆದಿತ್ತು. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕಿ ಪಿ.ಓ. ಪುಷ್ಪಾ ವಾದ ಮಂಡಿಸಿದ್ದರು.

ಆರೋಪ ಸಾಬೀತಾದ ಹಿನ್ನೆಲೆ ನ್ಯಾಯಾಧೀಶರಾದ ಪ್ರೀತಿ ಕೆ.ಪಿ. ಅವರು ತೀರ್ಪು ನೀಡಿದ್ದಾರೆ. ಅಪರಾಧಿಗೆ 10 ವರ್ಷ ಕಠಿಣ ಕಾರಗೃಹ ಶಿಕ್ಷೆ ಹಾಗೂ ₹20,000 ದಂಡ ವಿಧಿಸಿದ್ದಾರೆ. ಜತೆಗೆ, ನೊಂದ ಮಹಿಳೆಗೆ ₹15,000 ಪರಿಹಾರ ನೀಡುವಂತೆಯೂ ಆದೇಶಿಸಿದ್ದಾರೆ ಎಂದು ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ.