ಸಾಗರ ತಹಶೀಲ್ದಾರ್‌ ದಿಢೀರ್‌ ಕಾರ್ಯಾಚರಣೆ, ಲಾರಿ ಸೀಜ್‌, ದಾಖಲಾಯ್ತು ಕೇಸ್‌

ಸಾಗರ: ಅಕ್ರಮ ಜಂಬಿಟ್ಟಿಗೆ ಗಣಿಗಾರಿಕೆ ವಿರುದ್ಧ ತಹಶೀಲ್ದಾರ್ ಡಾ. ಪ್ರತಿಭಾ.ಆರ್ ದಾಳಿ ಮುಂದುವರೆಸಿದ್ದಾರೆ. ಸಾಗರ ತಾಲೂಕು ಬೊಮ್ಮತ್ತಿ ಸಮೀಪದ ಬ್ರಾಹ್ಮಣ ಮಂಚಾಲೆಯಲ್ಲಿ ಅಕ್ರಮವಾಗಿ ಜಂಬಿಟ್ಟಿಗೆ ಗಣಿಗಾರಿಕೆ ನಡೆಸುತ್ತಿದ್ದ ಸ್ಥಳದ ಮೇಲೆ ದಿಢೀರ್ ದಾಳಿ ನಡೆಸಿ, ಪ್ರಕರಣ ದಾಖಲಿಸಿದ್ದಾರೆ.➤ ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಸಾಗರ ತಾಲೂಕಿನ ಬ್ರಾಹ್ಮಣ ಮಂಚಾಲೆ ಗ್ರಾಮದಲ್ಲಿ ಅಕ್ರಮವಾಗಿ ಜಂಬಿಟ್ಟಿಗೆ ಗಣಿಗಾರಿಕೆ ನಡೆಸಿ ಲಾರಿಯಲ್ಲಿ ಸಾಗಿಸಲಾಗುತ್ತಿತ್ತು. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ತಹಶೀಲ್ದಾರ್ ಡಾ. ಪ್ರತಿಭಾ ಆರ್, ಜಂಬಿಟ್ಟಿಗೆ ಸಮೇತ ಲಾರಿಯನ್ನು ವಶಕ್ಕೆ ಪಡೆದು ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಕಂದಾಯ ನಿರೀಕ್ಷಕ ಗುರುರಾಜ್ ಹಾಗೂ ಗ್ರಾಮ ಆಡಳಿತಾಧಿಕಾರಿ ನಂದೀಶ್ ಕಾರ್ಯಾಚರಣೆಯಲ್ಲಿ ಇದ್ದರು.

Sagara-Thasildhar-Raid-on-laterite-quarrying-site.

ಈ ಕುರಿತು ಪ್ರತಿಕ್ರಿಯಿಸಿರುವ ತಹಶೀಲ್ದಾರ್ ಡಾ. ಪ್ರತಿಭಾ ಆರ್, “ಸಾಗರ ತಾಲೂಕಿನಲ್ಲಿ ಅಕ್ರಮ ಜಂಬಿಟ್ಟಿಗೆ ಹಾಗೂ ಮರಳು ಸಾಗಾಟವನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ. ಎಲ್ಲೇ ಅಕ್ರಮ ಚಟುವಟಿಕೆ ಕಂಡುಬಂದರೂ ನಿರ್ದಾಕ್ಷಿಣ್ಯ ಕಾನೂನು ಕ್ರಮ ಜರುಗಿಸಲಾಗುತ್ತದೆ. ಈ ದಾಳಿಯು ಎಲ್ಲರಿಗೂ ಎಚ್ಚರಿಕೆಯ ಗಂಟೆಯಾಗಬೇಕು” ಎಂದು ಎಚ್ಚರಿಕೆ ನೀಡಿದ್ದಾರೆ. ಸಾಗರ ತಾಲೂಕಿನಲ್ಲಿ ಅಕ್ರಮ ಗಣಿಗಾರಿಕೆಗೆ ಕಡಿವಾಣ ಹಾಕಲು ಮುಂದಾಗಿರುವ ತಹಶೀಲ್ದಾರ್ ಅವರ ಕ್ರಮಕ್ಕೆ ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ. ಇಲ್ಲಿದೆ ದಾಳಿಯ ವಿಡಿಯೋ