ಶಿವಮೊಗ್ಗ: ಡಿಜಿಟಲ್ ಪಾವತಿ ವ್ಯವಸ್ಥೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಕೆನರಾ ಬ್ಯಾಂಕ್ನ ಶಿವಮೊಗ್ಗ ವಲಯವು ನಗರದಲ್ಲಿ ಭೀಮ್ ಕ್ಯೂಆರ್ (BHIM QR) ಹಾಗೂ ಸೌಂಡ್ ಬಾಕ್ಸ್ ಕುರಿತು ವ್ಯಾಪಾರಿಗಳ ವಿಶೇಷ ಸಂಪರ್ಕ ಅಭಿಯಾನ ನಡೆಸಿತು.➤ ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.
ಮಣಿಪಾಲ ವೃತ್ತದ ಪ್ರಧಾನ ವ್ಯವಸ್ಥಾಪಕ ಹಾಗೂ ವೃತ್ತ ಕಚೇರಿ ಮುಖ್ಯಸ್ಥ ಹೆಚ್.ಕೆ. ಗಂಗಾಧರ್ ಅವರ ಮಾರ್ಗದರ್ಶನದಲ್ಲಿ ಅಭಿಯಾನ ನಡೆಸಲಾಯಿತು. ವಲಯದ ವಿವಿಧ ಶಾಖೆಗಳ ಸಿಬ್ಬಂದಿ ಒಂದೇ ದಿನದಲ್ಲಿ ಸುಮಾರು 500ಕ್ಕೂ ಹೆಚ್ಚು ವ್ಯಾಪಾರಿಗಳನ್ನು ಭೇಟಿ ಮಾಡಿ ಡಿಜಿಟಲ್ ಪಾವತಿ ಸೇವೆಗಳ ಕುರಿತು ಮಾಹಿತಿ ನೀಡಿದರು.

₹49ಕ್ಕೆ ಸೌಂಡ್ ಬಾಕ್ಸ್ ಸೇವೆಗೆ ವ್ಯಾಪಾರಿಗಳಿಂದ ಉತ್ತಮ ಸ್ಪಂದನೆ ದೊರೆತಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಪ್ರಾದೇಶಿಕ ಮುಖ್ಯಸ್ಥ ಸಂಜೀವ್ ಕುಮಾರ್ ನೇತೃತ್ವದಲ್ಲಿ ಅಭಿಯಾನ ನಡೆಸಲಾಯಿತು.