ಶಿವಮೊಗ್ಗ: ನಗರ ಉಪವಿಭಾಗ-1, ಘಟಕ-2ರ ವ್ಯಾಪ್ತಿಯಲ್ಲಿ ವಿದ್ಯುತ್ ಕಂಬಗಳನ್ನು ತೆರವುಗೊಳಿಸುವ ಕಾಮಗಾರಿ ಹಮ್ಮಿಕೊಂಡಿರುವ ಹಿನ್ನೆಲೆ ಆಗಸ್ಟ್ 1ರಂದು ಶಿವಮೊಗ್ಗ ನಗರದ ವಿವಿಧ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ. ➤ ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ.
ಆಗಸ್ಟ್ 1ರಂದು ಬೆಳಗ್ಗೆ 10ರಿಂದ ಸಂಜೆ 5ರವರೆಗೆ ಜಯನಗರ ಮುಖ್ಯರಸ್ತೆ ಮೆಟ್ರೋ ಆಸ್ಪತ್ರೆಯಿಂದ ಸರ್ವೋದಯ ಶಾಲೆಯವರೆಗೆ, ಜಯನಗರ 1ರಿಂದ 5ನೇ ಕ್ರಾಸ್ರವರೆಗೆ, ಸವಳಂಗ ರಸ್ತೆ, ನೆಹರು ಕ್ರೀಡಾಂಗಣ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.
