ಸಾಗರ: ತಾಲೂಕಿನಲ್ಲಿ ಭಾರಿ ಮಳೆ ಮುಂದುವರೆದ ಹಿನ್ನೆಲೆ ಆಗಸ್ಟ್ 3ರಂದು ರಜೆ ಘೋಷಿಸಿ ತಹಶೀಲ್ದಾರ್ ಡಾ. ಪ್ರತಿಭಾ.ಆರ್ ಆದೇಶಿಸಿದ್ದಾರೆ. ಸಾಗರ ತಾಲೂಕಿನ ಅಂಗನವಾಡಿಗಳು, ಪ್ರಾಥಮಿಕ, ಪ್ರೌಢ ಶಾಲೆಗಳು, ಪದವಿ ಪೂರ್ವ, ಡಿಪ್ಲೋಮಾ ಮತ್ತು ಐಟಿಐ ಕಾಲೇಜುಗಳಿಗೆ ರಜೆ ಘೋಷಣ ಮಾಡಲಾಗಿದೆ.➤ ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ.
ಇನ್ನು, ಸಾಗರ ತಾಲೂಕಿನ ವಿವಿಧೆಡೆ ಕಳೆದ ಮೂರು ದಿನದಿಂದ ಭಾರಿ ಮಳೆಯಾಗುತ್ತಿದೆ. ಸೋಮವಾರವು ಮಳೆ ಮುಂದುವರೆಯುವ ಸಾಧ್ಯತೆ ಹಿನ್ನೆಲೆ, ಮುನ್ನೆಚ್ಚರಿಕೆ ಕ್ರಮವಾಗಿ ರಜೆ ಘೋಷಣೆ ಮಾಡಲಾಗಿದೆ.
