ಶಿವಮೊಗ್ಗದ ಕಡೇಕಲ್‌ – ಮತ್ತೂರು ರಸ್ತೆ ಜಲಾವೃತ, ತೋಟಗಳಿಗೆ ನುಗ್ಗಿದ ತುಂಗೆ

ಶಿವಮೊಗ್ಗ: ಜಲಾನಯನ ಪ್ರದೇಶದಲ್ಲಿ ಭಾರಿ ಮಳೆಯಾಗಿರುವ ಹಿನ್ನೆಲೆ ತುಂಗಾ ಜಲಾಶಯಕ್ಕೆ ಒಳಹರಿವು ಗಣನೀಯವಾಗಿ ಹೆಚ್ಚಳವಾಗಿದ್ದು, ನದಿಗೆ ಅಪಾರ ಪ್ರಮಾಣದ ನೀರನ್ನು ಹೊರಬಿಡಲಾಗಿದೆ. ಪರಿಣಾಮ ಶಿವಮೊಗ್ಗ ತಾಲೂಕಿನ ಕಡೇಕಲ್-ಮತ್ತೂರು ಮುಖ್ಯ ರಸ್ತೆ ಸಂಪೂರ್ಣ ಜಲಾವೃತಗೊಂಡಿದ್ದು, ನದಿ ಪಾತ್ರದ ಅಡಿಕೆ ತೋಟಗಳು ನೀರಿನಲ್ಲಿ ಮುಳುಗಿವೆ.➤ ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ತುಂಗಾ ಜಲಾಶಯಕ್ಕೆ ಸದ್ಯ 94,500 ಕ್ಯೂಸೆಕ್ ನೀರು ಹರಿದುಬರುತ್ತಿದ್ದು, ಅಷ್ಟೇ ಪ್ರಮಾಣದಲ್ಲಿ ಅಂದರೆ 92,500 ಕ್ಯೂಸೆಕ್ ನೀರನ್ನು ನದಿಗೆ ಹರಿಸಲಾಗುತ್ತಿದೆ.

Kadekal-Mattur-Road-Drowned-after-tunga-river-overflow.

ತೀರ್ಥಹಳ್ಳಿ ಹಾಗೂ ಶೃಂಗೇರಿ ಭಾಗದಲ್ಲಿ ಇಂದು ಮಳೆ ತುಸು ಕಡಿಮೆಯಾಗಿದ್ದು ಒಳಹರಿವು ಕಡಿಮೆ ಆಗುವ ಸಾಧ್ಯತೆಯಿದೆ. ಆದರೂ, ತುಂಗಾ ನದಿ ಉಕ್ಕಿ ಹರಿಯುತ್ತಿರುವುದರಿಂದ ಮತ್ತೂರು ಭಾಗದಲ್ಲಿ ತೋಟ-ಗದ್ದೆಗಳಿಗೆ ನೀರು ನುಗ್ಗಿ ರೈತರು ಸಂಕಷ್ಟ ಎದುರಿಸುವಂತಾಗಿದೆ.