ತೀರ್ಥಹಳ್ಳಿ: ಮುಂಗಾರು ಮಳೆಯ ಅಬ್ಬರ; ಆಗಸ್ಟ್‌ 3ರಂದು ರಜೆ ಘೋಷಣೆ

ತೀರ್ಥಹಳ್ಳಿ: ತಾಲೂಕಿನಲ್ಲಿ ಪುಷ್ಯ ಮಳೆಯ ಅಬ್ಬರ ಜೋರಾಗಿದ್ದು, ಕಳೆದ ಮೂರ್ನಾಲ್ಕು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿದೆ. ಆಗಸ್ಟ್ 3ರಂದು ಸೋಮವಾರವೂ ಮಳೆ ಮುಂದುವರೆಯುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ, ಮುನ್ನೆಚ್ಚರಿಕೆ ಕ್ರಮವಾಗಿ ತಾಲೂಕಿನ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ ತಹಶೀಲ್ದಾರ್‌ ರಂಜಿತ್‌ ಆದೇಶ ಹೊರಡಿಸಿದ್ದಾರೆ.➤ ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ.

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಯಾರಿಗೆಲ್ಲ ರಜೆ ಅನ್ವಯ?

ತೀರ್ಥಹಳ್ಳಿ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆಗಳು, ಅನುದಾನಿತ ಹಾಗೂ ಅನುದಾನರಹಿತ ಶಾಲೆಗಳು ಮತ್ತು ಕಾಲೇಜುಗಳಿಗೆ ಈ ರಜೆ ಅನ್ವಯವಾಗಲಿದೆ.

Rain-in-Shimoga-City