ಶಿವಮೊಗ್ಗ: ಜಿಲ್ಲೆಯ ವಿವಿಧೆಡೆ ಮಳೆ ಮುಂದುವರೆದಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಎರಡು ತಾಲೂಕುಗಳು ಹಾಗೂ ಒಂದು ಹೋಬಳಿಯಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಜಿಲ್ಲೆಯಲ್ಲಿ ಮಳೆಯ ಅಬ್ಬರ ಕೊಂಚ ತಗ್ಗಿದೆಯಾದರೂ, ಇಂದೂ ಕೂಡ ಮಳೆ ಮುಂದುವರೆಯುವ ಸಾಧ್ಯತೆಯಿದೆ.➤ ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ.
ಯಾರಿಗೆಲ್ಲ ರಜೆ ಅನ್ವಯ?
ಸಾಗರ ತಾಲೂಕು, ತೀರ್ಥಹಳ್ಳಿ ತಾಲೂಕು ಹಾಗೂ ಹೊಸನಗರ ತಾಲೂಕಿನ ನಗರ ಹೋಬಳಿಯ ಶಾಲೆ ಮತ್ತು ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಉಳಿದಂತೆ ಜಿಲ್ಲೆಯ ಇತರ ಕಡೆಗಳಲ್ಲಿ ಶಾಲೆ ಹಾಗೂ ಕಾಲೇಜುಗಳ ತರಗತಿಗಳು ಎಂದಿನಂತೆ ಸಾಮಾನ್ಯಯವಾಗಿ ನಡೆಯಲಿವೆ.
