ಬೇಳೂರು ಗೋಪಾಲಕೃಷ್ಣ ಗರಂ, ಶಾಸಕ ಸ್ಥಾನಕ್ಕೆ ರಾಜೀನಾಮೆಯ ನಿರ್ಧಾರ ಪ್ರಕಟ, ಏನಂದ್ರು?

ಬೆಂಗಳೂರು: ಸಚಿವ ಸ್ಥಾನ ಸಿಗಲಿದೆ ಎಂಬ ನಿರೀಕ್ಷೆಯಲ್ಲಿದ್ದ ಸಾಗರ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ ಅವರಿಗೆ ತೀವ್ರ ನಿರಾಸೆಯಾಗಿದೆ. ಇದರಿಂದ ಆಕ್ರೋಶಗೊಂಡಿರುವ ಬೇಳೂರು ಗೋಪಾಲಕೃಷ್ಣ, ನಾಳೆ ಬೆಳಿಗ್ಗೆ 10 ಗಂಟೆಗೆ ಶಾಸಕ ಸ್ಥಾನ ಹಾಗೂ ನಿಗಮ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ.➤ ಸುದ್ದಿಯ ಮುಂದಿನ 4 ಪ್ಯಾರಾಗಳು ಕೆಳಗಿವೆ.

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಬೆಂಗಳೂರಿನ ತಮ್ಮ ಮನೆಯಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಬೇಳೂರು ಗೋಪಾಲಕೃಷ್ಣ, ಈ ರೀತಿ ಮೋಸ ಆಗುತ್ತದೆ ಎಂದು ಅಂದುಕೊಂಡಿರಲಿಲ್ಲ. ನಮ್ಮ ತಾಲೂಕಿನ ಜನ ಮತ್ತು ಮುಖಂಡರು ಬಹಳ ಬೇಸರದಲ್ಲಿದ್ದಾರೆ ಎಂದರು.

Beluru-Gopalakrishna-in-a-press-meet

ಇಲ್ಲಿದೆ ಬೇಳೂರು ಆಕ್ರೋಶದ ನುಡಿ

ಮುಖ್ಯಮಂತ್ರಿ ಮಕ್ಕಳಾಗಿರಬೇಕು: ಹಿಂದೆ ಮೂರು ವರ್ಷ ಕೆಲವರಿಗೆ ಸಚಿವ ಸ್ಥಾನ ನೀಡಲಾಗಿದೆ. ಹಾಗಾಗಿ ತಮಗೊಂದು ಅವಕಾಶ ಸಿಗುತ್ತದೆ ಎಂಬ ನಿರೀಕ್ಷೆಯಿತ್ತು. ಆದರೆ ರಾಜಕೀಯದಲ್ಲಿ ಪ್ರಬಲವಾಗಿರಬೇಕು ಅಥವಾ ಮಾಜಿ ಮುಖ್ಯಮಂತ್ರಿಗಳು ಮತ್ತು ಮಂತ್ರಿಗಳ ಮಕ್ಕಳು ಇದ್ದರೆ ಮಾತ್ರ ಆದ್ಯತೆ ಸಿಗುತ್ತದೆ ಅನಿಸುತ್ತದೆ. ಸಾಮಾನ್ಯ ಶಾಸಕರಿಗೆ ಮಂತ್ರಿಯಾಗಿ ಜನಸೇವೆ ಮಾಡಲು ಸಾಧ್ಯವಿಲ್ಲವೇ ಎಂದು ಅವರು ಪ್ರಶ್ನಿಸಿದರು.

ಬಂಗಾರಪ್ಪ ಗರಡಿಯಲ್ಲಿ ಬೆಳೆದಿದ್ದು: ತಾವೂ ಕೂಡ ಬಂಗಾರಪ್ಪ ಅವರ ಗರಡಿಯಲ್ಲಿ ಬೆಳೆದು ಮೂರು ಬಾರಿ ಶಾಸಕರಾಗಿದ್ದು, ಹಿಂದುಳಿದ ವರ್ಗದಿಂದ ಬಂದಿದ್ದರೂ ಸಚಿವ ಸ್ಥಾನ ನೀಡಲಿಲ್ಲ. ಶಿವಮೊಗ್ಗ ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆಯಲ್ಲಿ ಆದ ಸೋಲಿನ ಹೊಣೆ ಹಾಗೂ ವಸ್ತು ಸಂಗತಿಗಳು ಗೊತ್ತಿದ್ದರೂ ತಮಗೆ ಸಚಿವ ಸ್ಥಾನ ತಪ್ಪಿಸಲಾಗಿದೆ ಎಂದು ಆರೋಪಿಸಿದರು.

ನಾಳೆ ಬೆಳಿಗ್ಗೆ ರಾಜೀನಾಮೆ: ಹೊಸಬರಿಗೆ ಅವಕಾಶ ನೀಡಲಾಗಿದೆ ಎನ್ನುತ್ತಾರೆ, ಆದರೆ ಯಾವ ಹೊಸಬರಿಗೆ ಕೊಟ್ಟಿದ್ದಾರೆ. ಮೂರು ಬಾರಿ ಶಾಸಕರಾದರೂ ಮಂತ್ರಿ ಸ್ಥಾನ ಕೊಡದಿದ್ದರೆ ಹೇಗೆ ಎಂದು ಅಸಮಾಧಾನ ವ್ಯಕ್ತಪಡಿಸಿದ ಬೇಳೂರು ಗೋಪಾಲಕೃಷ್ಣ, ಕ್ಷೇತ್ರದ ಜನತೆ ಹಾಗೂ ಅಭಿಮಾನಿಗಳ ಅಪೇಕ್ಷೆಯಂತೆ ಬೆಂಬಲಿಗರ ಜತೆ ಚರ್ಚಿಸಿ ನಾಳೆ ಬೆಳಿಗ್ಗೆ ರಾಜೀನಾಮೆ ಸಲ್ಲಿಸುವುದಾಗಿ ಸ್ಪಷ್ಟಪಡಿಸಿದ್ದಾರೆ.