SHIMOGA| ಮಿನಿಸ್ಟರ್ ವಿರುದ್ಧ ಶಿವಮೊಗ್ಗದಲ್ಲಿ ಇವತ್ತೂ ನಡೆಯಿತು ಪ್ರತಿಭಟನೆ, ಸಂಪುಟದಿಂದ ಕೈಬಿಡುವಂತೆ ಆಗ್ರಹ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA | 20 ನವೆಂಬರ್ 2019

ಕಾನೂನು ಸಚಿವ ಮಾಧುಸ್ವಾಮಿ ರಾಜೀನಾಮೆಗೆ ಒತ್ತಾಯಿಸಿ ಶಿವಮೊಗ್ಗದಲ್ಲಿ ಇವತ್ತೂ ಪ್ರತಿಭಟನೆ ನಡೆಯಿತು. ಹಾಲುಮತ ಮಹಾಸಭಾ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿ, ಸಚಿವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಲಾಯಿತು.

75513509 734999633646616 7700410297646841856 n.jpg? nc cat=109& nc oc=AQnAiXvZmKMoh2H7N8fiQ7vqv5A0FBBudTzqC NlSgSZrR3PL8nfRCTcrzVH2bPbkAA& nc ht=scontent.fblr11 1

ಸಚಿವ ಮಾಧುಸ್ವಾಮಿ ಅವರು ಶ್ರೀ ಈಶ್ವರಾನಂದ ಸ್ವಾಮೀಜಿ ಅವರಿಗೆ ಅಗೌರವ ತೋರಿದ್ದಾರೆ. ಈ ಕುರಿತು ಕುರುಬ ಸಮಾಜದವರು ಸಚಿವರನ್ನು ಪ್ರಶ್ನಿಸಿದಾಗ, ತನ್ನನ್ನು ತಾನು ಒಂದು ಸಮಾಜದ ನಾಯಕ ಎಂದು ಹೇಳಿದ್ದಾರೆ.

ಅಲ್ಲದೆ ಬೇರೆ ಸಮಾಜದ ಬಗ್ಗೆ  ತನಗೆ ಆಸಕ್ತಿ ಇಲ್ಲ ಎಂದು ಉದ್ಧಟತನದ ಹೇಳಿಕೆ ನೀಡಿದ್ದಾರೆ. ಹಾಗಾಗಿ ಕೂಡಲೆ ಅವರನ್ನು ಸಚಿವ ಸಂಪುಟದಿಂದ ಕೈಬಿಡಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆ ಬಳಿಕ ಜಿಲ್ಲಾಧಿಕಾರಿ ಮೂಲಕ ರಾಜ್ಯಪಾಲಕರಿಗೆ ಮನವಿ ಸಲ್ಲಿಸಲಾಯಿತು. ಎಂ.ಈಶ್ವರಪ್ಪ ನವುಲೆ, ಲಿಂಗದಹಳ್ಳಿ ಹಾಲಪ್ಪ, ತಿಮ್ಮಪ್ಪ, ವಿಜಯಕುಮಾರ್, ದೊಡ್ಡಪ್ಪ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿದ್ದರು.

76710786 2452757251635698 5877685997528940544 n.jpg? nc cat=111& nc oc=AQkfdm wozZCqvoJP47HwZm 0R9NGaWRw5gDGdbVHhdlnMy7AueDKlrt9CWVeNX4AQ& nc ht=scontent.fblr11 1

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200

ಸುದ್ದಿಗಾಗಿ ಕರೆ ಮಾಡಿ – 9964634494

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment