ಶಿವಮೊಗ್ಗ: ತುಂಗಾ ಏತ ನೀರಾವರಿ ಯೋಜನೆ ಹಾಗೂ ಹೊಸಹಳ್ಳಿ ಏತ ನೀರಾವರಿ ಯೋಜನೆಯ ವ್ಯಾಪ್ತಿಗೆ ಒಳಪಡುವ ಎಲ್ಲಾ ಕೆರೆಗಳಿಗೂ ಸಮರ್ಪಕವಾಗಿ ನೀರು ತುಂಬಿಸುವಂತೆ ಅಧಿಕಾರಿಗಳಿಗೆ ಶಾಸಕಿ ಶಾರದಾ ಪೂರ್ಯನಾಯ್ಕ್ ಸೂಚನೆ ನೀಡಿದ್ದಾರೆ.➤ ಸುದ್ದಿಯ ಮುಂದಿನ 4 ಪ್ಯಾರಾಗಳು ಕೆಳಗಿವೆ.
ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಶಾಸಕರ ಕಚೇರಿಯಲ್ಲಿ ನೀರಾವರಿ ಇಲಾಖೆ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿಗಳೊಂದಿಗೆ ಅವರು ಸಭೆ ನಡೆಸಿ ಮಾತನಾಡಿದರು.

ರೈತರ ಅಹವಾಲು ಆಲಿಕೆ
ಸಭೆಯಲ್ಲಿ ಹಾರನಹಳ್ಳಿ ಹಾಗೂ ಕುಂಸಿ ಭಾಗದ ರೈತರು ಭಾಗವಹಿಸಿ, ಕೆರೆಗಳಿಗೆ ಸಮರ್ಪಕವಾಗಿ ನೀರು ಹರಿಸದಿರುವುದು, ನೀರಿನ ಹಂಚಿಕೆಯಲ್ಲಿ ಉಂಟಾಗಿರುವ ತೊಂದರೆಗಳು ಹಾಗೂ ಮುಂಬರುವ ಕೃಷಿ ಚಟುವಟಿಕೆಗಳಿಗೆ ಅಗತ್ಯವಿರುವ ನೀರಿನ ಲಭ್ಯತೆ ಕುರಿತು ತಮ್ಮ ಸಮಸ್ಯೆಗಳನ್ನು ಶಾಸಕರ ಗಮನಕ್ಕೆ ತಂದರು.
ಎಂಎಲ್ಎ ಸೂಚನೆಗಳೇನು?
ರೈತರ ಸಮಸ್ಯೆಗಳನ್ನು ಗಂಭೀರವಾಗಿ ಪರಿಗಣಿಸಿದ ಶಾಸಕಿ ಶಾರದಾ ಪೂರ್ಯಾನಾಯ್ಕ್, ರೈತರ ಹಿತಾಸಕ್ತಿಗೆ ಹೆಚ್ಚಿನ ಆದ್ಯತೆ ನೀಡುವ ಮೂಲಕ ಯೋಜನೆಯ ಮೂಲ ಉದ್ದೇಶ ಸಂಪೂರ್ಣವಾಗಿ ಈಡೇರುವಂತೆ ನೋಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ನೀರಿನ ಹರಿವು, ಕೆರೆಗಳ ಭರ್ತಿ ಪ್ರಗತಿ ಹಾಗೂ ತಾಂತ್ರಿಕ ಅಡಚಣೆಗಳ ಬಗ್ಗೆಯೂ ಮಾಹಿತಿ ಪಡೆದ ಅವರು, ರೈತರಿಗೆ ತೊಂದರೆ ಆಗದಂತೆ ತ್ವರಿತ ಕ್ರಮಕೈಗೊಳ್ಳುವಂತೆ ಸೂಚಿಸಿದರು. ಸಭೆಯಲ್ಲಿ ನೀರಾವರಿ ಮತ್ತು ಆರ್ಡಿಪಿಆರ್ ಇಲಾಖೆಯ ಅಧಿಕಾರಿಗಳು, ಹಾರನಹಳ್ಳಿ ಮತ್ತು ಕುಂಸಿ ಭಾಗದ ರೈತರು ಹಾಗೂ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.