ಭದ್ರಾವತಿ: ವಿದ್ಯುತ್ ವಿತರಣಾ ಘಟಕ- 3ರ ವ್ಯಾಪ್ತಿಯಲ್ಲಿ ಆಗಸ್ಟ್ 5ರಂದು ವಿದ್ಯುತ್ ಮಾರ್ಗ ನಿರ್ವಹಣಾ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಆದ್ದರಿಂದ ಬೆಳಿಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆವರೆಗೆ ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.➤ ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ.
ಎಲ್ಲೆಲ್ಲಿ ಕರೆಂಟ್ ಇರಲ್ಲ?
ನಗರದ ಬಿ.ಹೆಚ್. ರಸ್ತೆ, ಚಾಮೇಗೌಡ ಬೀದಿ, ಹಾಲಪ್ಪ ವೃತ್ತ, ಲೋಯರ್ ಹುತ್ತಾ, ಮೀನುಗಾರರ ಬೀದಿ, ಗೌಳಿಗರ ಬೀದಿ, ಸಹ್ಯಾದ್ರಿ ಬಡಾವಣೆ ಹಾಗೂ ಸುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
