ಶಿವಮೊಗ್ಗ: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಆಗಸ್ಟ್ 7 ರಂದು ಬೆಳಿಗ್ಗೆ 10 ಗಂಟೆಗೆ ಇಂಡಸ್‌ಲ್ಯಾಂಡ್ ಬ್ಯಾಂಕ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನವನ್ನು ಆಯೋಜಿಸಲಾಗಿದೆ.➤ ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.
ಈ ಸಂದರ್ಶನದಲ್ಲಿ ಭಾಗವಹಿಸಲು ಎಸ್.ಎಸ್.ಎಲ್.ಸಿ., ಪಿಯುಸಿ ಅಥವಾ ಯಾವುದೇ ಪದವಿ ಪಾಸಾದ ಹಾಗೂ 18 ರಿಂದ 30 ವರ್ಷದೊಳಗಿನ ಅಭ್ಯರ್ಥಿಗಳು ಅರ್ಹರಾಗಿರುತ್ತಾರೆ. ಆಸಕ್ತರು ತಮ್ಮ ಬಯೋ-ಡೇಟಾ ಮತ್ತು ಆಧಾರ್ ಕಾರ್ಡ್ ಪ್ರತಿಗಳೊಂದಿಗೆ ನೇರ ಸಂದರ್ಶನಕ್ಕೆ ಹಾಜರಾಗಬಹುದು. ಸಂದರ್ಶನದಲ್ಲಿ ಪಾಲ್ಗೊಳ್ಳಲು ಉಚಿತ ಪ್ರವೇಶವಿರುತ್ತದೆ.

ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಗುತ್ಯಪ್ಪ ಕಾಲೋನಿ, ಪಂಪಾ ನಗರ 2ನೇ ಕ್ರಾಸ್, ಸಾಗರ ರಸ್ತೆ, ಶಿವಮೊಗ್ಗ ಇಲ್ಲಿ ಸಂದರ್ಶನ ನಡೆಯಲಿದೆ. ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯನ್ನು ನೇರವಾಗಿ ಅಥವಾ 9380663606, 9108235132 ದೂರವಾಣಿ ಸಂಖ್ಯೆಗಳ ಮೂಲಕ ಸಂಪರ್ಕಿಸಬಹುದೆಂದು ಉದ್ಯೋಗಾಧಿಕಾರಿಗಳು ತಿಳಿಸಿದ್ದಾರೆ.