ಆಶಾ ಕಾರ್ಯಕರ್ತೆ ಮನೆಯಲ್ಲಿ ಲಕ್ಷ ಲಕ್ಷದ ಚಿನ್ನಾಭರಣ, ನಗದು ಕಳ್ಳತನ, ಹೇಗಾಯ್ತು ಕೃತ್ಯ?

ಭದ್ರಾವತಿ: ಯರೇಹಳ್ಳಿ ಬಸಾಪುರ ಗ್ರಾಮದಲ್ಲಿ ಮನೆಯೊಂದರ ಬಾಗಿಲಿನ ಬೀಗ ಮುರಿದು ಲಕ್ಷಾಂತರ ರುಪಾಯಿ ಮೌಲ್ಯದ ಚಿನ್ನ-ಬೆಳ್ಳಿ ಆಭರಣ ಹಾಗೂ ನಗದು ಕಳವು ಮಾಡಲಾಗಿದೆ.➤ ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಆಶಾ ಕಾರ್ಯಕರ್ತೆ ಪವಿತ್ರಾ ಎಂಬುವರರ ಮನೆಯಲ್ಲಿ ಕಳ್ಳತನ ನಡೆದಿದೆ. ಪವಿತ್ರಾ ಅವರು, ಭದ್ರಾವತಿಯ ತಮ್ಮ ತಾಯಿ ಮನೆಗೆ ತೆರಳಿದ್ದರು. ಮರುದಿನ ವಾಪಸ್ ಬಂದು ನೋಡಿದಾಗ, ಮನೆಯ ಬಾಗಿಲಿನ ಬೀಗ ಮುರಿದಿರುವುದು ಕಂಡುಬಂದಿದೆ. ಹಾಲ್‌ನಲ್ಲಿದ್ದ ಅಲ್ಮೇರಾ ಒಡೆದು ಬಟ್ಟೆಗಳನ್ನು ಚೆಲ್ಲಾಪಿಲ್ಲಿ ಮಾಡಲಾಗಿತ್ತು.

Shimoga-Police-Jeep

ಲಾಕರ್‌ನಲ್ಲಿಟ್ಟಿದ್ದ ಸುಮಾರು 27.5 ಗ್ರಾಂ ತೂಕದ ಅಂದಾಜು ₹1,70,000 ಮೌಲ್ಯದ ಚಿನ್ನದ ಆಭರಣಗಳು, 109 ಗ್ರಾಂ ತೂಕದ ₹19,500 ಮೌಲ್ಯದ ಬೆಳ್ಳಿ ವಸ್ತುಗಳು ಹಾಗೂ 2 ಲಕ್ಷ ನಗದು ಸೇರಿ ಒಟ್ಟು ₹3,89,500 ಮೌಲ್ಯದ ವಸ್ತುಗಳು ಕಳ್ಳತನವಾಗಿವೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಘಟನೆ ಸಂಬಂಧ ಭದ್ರಾವತಿಯ ಹೊಸಮನೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.