ಶಿವಮೊಗ್ಗ: ಸಚಿವ ಎಸ್. ಮಧು ಬಂಗಾರಪ್ಪ ಅವರು ಆಗಸ್ಟ್ 7 ರಿಂದ 9 ರವರೆಗೆ ಮೂರು ದಿನ ಶಿವಮೊಗ್ಗ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಈ ಅವಧಿಯಲ್ಲಿ ಅವರು ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಅತಿವೃಷ್ಠಿ ಹಾಗೂ ಅನಾವೃಷ್ಠಿಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ ಎಂದು ಅವರ ಆಪ್ತ ಕಾರ್ಯದರ್ಶಿಗಳು ತಿಳಿಸಿದ್ದಾರೆ.➤ ಸುದ್ದಿಯ ಮುಂದಿನ 3 ಪ್ಯಾರಾಗಳು ಕೆಳಗಿವೆ.
ಯಾವ್ಯಾವ ದಿನ ಎಲ್ಲೆಲ್ಲಿಗೆ ಭೇಟಿ ನೀಡ್ತಾರೆ?

ಬೆಳಗ್ಗೆ 10ಕ್ಕೆ ಸೊರಬದ ಬಂಗಾರಧಾಮಕ್ಕೆ ಭೇಟಿ ನೀಡಲಿದ್ದಾರೆ. ನಂತರ ರಂಗಮಂದಿರದಲ್ಲಿ ಪಕ್ಷದ ಕಾರ್ಯಕರ್ತರ ಸಭೆ ನಡೆಸಲಿದ್ದಾರೆ. ಮಧ್ಯಾಹ್ನ 1.30 ಕ್ಕೆ ಸೊರಬ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿ, ಕ್ಷೇತ್ರ ವ್ಯಾಪ್ತಿಯಲ್ಲಿ ಅತಿವೃಷ್ಠಿ ಮತ್ತು ಅನಾವೃಷ್ಠಿಯಿಂದ ಬಾಧಿತವಾಗಿರುವ ಪ್ರದೇಶಗಳಿಗೆ ಭೇಟಿ ನೀಡಲಿದ್ದಾರೆ.


ಬೆಳಗ್ಗೆ 10ಕ್ಕೆ ಶಿಕಾರಿಪುರ ತಾಲೂಕು ವ್ಯಾಪ್ತಿಯಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ. ಮಧ್ಯಾಹ್ನ 12.30 ಕ್ಕೆ ಶಿವಮೊಗ್ಗ ನಗರಕ್ಕೆ ಆಗಮಿಸಿ ಜಿಲ್ಲಾ ಕಾಂಗ್ರೆಸ್ ಭವನಕ್ಕೆ ಭೇಟಿ ನೀಡಲಿದ್ದಾರೆ. ಮಧ್ಯಾಹ್ನ 2.30ಕ್ಕೆ ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶಿವಮೊಗ್ಗ ನಗರ ಹಾಗೂ ಗ್ರಾಮಾಂತರ ತಾಲೂಕುಗಳ ಅತಿವೃಷ್ಠಿ-ಅನಾವೃಷ್ಠಿ ಪರಿಸ್ಥಿತಿ ಕುರಿತು ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ.

ಬೆಳಗ್ಗೆ 9.30ಕ್ಕೆ ತೀರ್ಥಹಳ್ಳಿ ತಾಲೂಕಿನ ಇಂದಿರಾನಗರದಲ್ಲಿ ಗುಡ್ಡ ಕುಸಿತ ಉಂಟಾದ ಸ್ಥಳಕ್ಕೆ ಹಾಗೂ ಸಂತ್ರಸ್ತರ ವಾಸ ಸ್ಥಳಗಳಿಗೆ ಭೇಟಿ ನೀಡಲಿದ್ದಾರೆ. ಬೆಳಿಗ್ಗೆ 10.30ಕ್ಕೆ ತೀರ್ಥಹಳ್ಳಿ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಪರಿಸ್ಥಿತಿಯ ಪರಾಮರ್ಶೆ ನಡೆಸಲಿದ್ದಾರೆ.