ಆನಂದಪುರ: ನಕಲಿ ಬಂಗಾರದ ನಾಣ್ಯಗಳನ್ನು ನೀಡಿ ವ್ಯಕ್ತಿಯೊಬ್ಬರಿಗೆ ಲಕ್ಷಾಂತರ ರುಪಾಯಿ ವಂಚಿಸಿದ್ದ ಆರೋಪಿಯನ್ನು ಆನಂದಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ. ವಿಜಯನಗರ ಜಿಲ್ಲೆ ಹರಪನಹಳ್ಳಿ ತಾಲೂಕು ಯಲ್ಲಾಪುರ ಗ್ರಾಮದ ಮಂಜುನಾಥ.ವಿ (30) ಬಂಧಿತ.➤ ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ.
ಜೂನ್ 4 ರಂದು ಮಂಜು ಎಂಬಾತ ಜಗದೀಶ್ ಎಂಬುವವರನ್ನು ಸಾಗರ ತಾಲೂಕಿನ ಜೋಗಿನಗದ್ದೆ ಗ್ರಾಮಕ್ಕೆ ಕರೆಸಿಕೊಂಡು, ಕಡಿಮೆ ಬೆಲೆಗೆ ಬಂಗಾರದ ನಾಣ್ಯ ನೀಡುವುದಾಗಿ ನಂಬಿಸಿ ₹9,60,000 ಪಡೆದು ನಕಲಿ ನಾಣ್ಯಗಳನ್ನು ನೀಡಿ ವಂಚಿಸಿದ್ದ. ಈ ಕುರಿತು ಆನಂದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಎಎಸ್‌ಪಿ ಬೆನಕ ಪ್ರಸಾದ್ ಮಾರ್ಗದರ್ಶನದಲ್ಲಿ, ಪಿಎಸ್‌ಐ ಪ್ರವೀಣ್.ಎಸ್.ಪಿ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದೆ. ಆತನಿಂದ ₹7,10,000 ನಗದು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
