ದೊಡ್ಡಪೇಟೆ ಠಾಣೆ ಆವರಣದಲ್ಲಿ ಸಾರ್ವಜನಿಕರಿಗೆ 50 ಮೊಬೈಲ್ ಫೋನ್‌ ಹಸ್ತಾಂತರ

ಶಿವಮೊಗ್ಗ: ದೊಡ್ಡಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2023, 2024, 2025 ಹಾಗೂ 2026ನೇ ಸಾಲಿನಲ್ಲಿ ಕಳುವಾಗಿ CEIR ಪೋರ್ಟಲ್‌ನಲ್ಲಿ ದೂರು ದಾಖಲಾಗಿದ್ದ ಮೊಬೈಲ್‌ಗಳನ್ನು ಪೊಲೀಸರು ಪತ್ತೆ ಮಾಡಿದ್ದು, ವಾರಸುದಾರರಿಗೆ ಹಸ್ತಾಂತರಿಸಿದ್ದಾರೆ.

ದೊಡ್ಡಪೇಟೆ ಪೊಲೀಸ್ ಇನ್‌ಸ್ಪೆಕ್ಟರ್ ಸತ್ಯನಾರಾಯಣ್.ವೈ ಅವರ ಮಾರ್ಗದರ್ಶನದಲ್ಲಿ ವಿಶೇಷ ತಂಡ ರಚಿಸಲಾಗಿತ್ತು. ಪಿಎಸ್‌ಐ ಎಂ.ಎನ್. ಅಂಬಿಗೇರ್ ಹಾಗೂ ಅಪರಾಧ ವಿಭಾಗದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಒಟ್ಟು 50 ಸ್ಮಾರ್ಟ್‌ಫೋನ್‌ಗಳನ್ನು ಪತ್ತೆ ಹಚ್ಚಿದ್ದಾರೆ. ದೊಡ್ಡಪೇಟೆ ಠಾಣೆ ಆವರಣದಲ್ಲಿಯೇ ಅವುಗಳನ್ನು ವಾರಸುದಾರರಿಗೆ ಹಸ್ತಾಂತರ ಮಾಡಲಾಯಿತು ಎಂದು ಪೊಲೀಸ್‌ ಪ್ರಕಟಣೆಯಲ್ಲಿ ತಿಳಿಸಲಾಗಿದೆ.  

mobile-phones-recovered-by-doddapete-police