ಶಿವಮೊಗ್ಗ: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕರ ಸ್ವತಂತ್ರ ಸಂಘದ ವತಿಯಿಂದ ಆಗಸ್ಟ್ 10ರಂದು ಅಂಗನವಾಡಿಗಳ ಬಂದ್ಗೆ ಕರೆ ನೀಡಲಾಗಿದೆ. ➤ ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ.
ಅಂದು ರಾಜ್ಯಾದ್ಯಂತ ಅಂಗನವಾಡಿ ಕೇಂದ್ರಗಳನ್ನು ಮುಚ್ಚಿ, ಬೆಳಿಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಬೃಹತ್ ಮುಷ್ಕರ ಹಾಗೂ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ರಾಜ್ಯ ಘಟಕದ ಅಧ್ಯಕ್ಷೆ ಬಿ.ಪ್ರೇಮ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
