ಶಿವಮೊಗ್ಗ: ನಗರದ ಕಟೀಲ್ ಅಶೋಕ್ ಪೈ ಸ್ಮಾರಕ ನರ್ಸಿಂಗ್ ಕಾಲೇಜಿನಲ್ಲಿ ಡಿಪ್ಲೋಮಾ ಇನ್ ಹಾಸ್ಪಿಟಲ್ ನರ್ಸಿಂಗ್ ಆಂಡ್ ಮಿಡ್ವೈಫರಿ ವಿದ್ಯಾರ್ಥಿಗಳಿಗೆ ಡಿಪ್ಲೋಮಾ ಪದವಿ ಪ್ರಮಾಣಪತ್ರ ವಿತರಣೆ ಕಾರ್ಯಕ್ರಮ ನಡೆಯಿತು.➤ ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.
ಮಾನಸ ಟ್ರಸ್ಟ್ನ ನಿರ್ದೇಶಕಿ ರಜನಿ ಎ. ಪೈ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ವಿತರಿಸಿ ಶುಭ ಹಾರೈಸಿ, ವಿದ್ಯಾರ್ಥಿಗಳು ಉತ್ತಮ ಸೇವಾ ಮನೋಭಾವ, ಶಿಸ್ತು ಹಾಗೂ ವೃತ್ತಿಪರ ಕೌಶಲಗಳನ್ನು ಬೆಳೆಸಿಕೊಂಡು ಸಮಾಜಕ್ಕೆ ಗುಣಮಟ್ಟದ ಆರೋಗ್ಯ ಸೇವೆ ನೀಡಬೇಕು ಎಂದರು.

ಕಾಲೇಜಿನ ಪ್ರಾಂತುಪಾಲ ಪ್ರೊ.ಎಸ್.ಮಲ್ಲಿಕಾರ್ಜುನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಪ್ರಮುಖರಾದ ರಾಮಚಂದ್ರ ಬಾಳಿಗ, ಡಾ.ರಾಜೇಂದ್ರ, ಚಿನ್ನಿ, ಅನ್ನಪೂರ್ಣ, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿಗಳು ಹಾಜರಿದ್ದರು.